ಜಿಲ್ಲಾದ್ಯಂತ ಸ್ವಚ್ಛತಾ ಅಭಿಯಾನಕ್ಕೆ ಮುನ್ನುಡಿ ಬರೆದ ಸಂಘ-ಸಂಸ್ಥೆಗಳೇ ಸ್ಥಳೀಯಾಡಳಿತ ಹಾಗೂ ಜಿಲ್ಲಾಡಳಿತಕ್ಕೆ ಮಾದರಿಯಾಗಿವೆ. ಈ ನಿಟ್ಟಿನಲ್ಲಿ ಕ್ಲಿನ್ ಕುಂದಾಪುರ, ಕೋಟದ ಪಂಚವರ್ಣ ಸಂಘಟನೆ, ಕ್ಲಿನ್ ಕಿನಾರ ಬೈಂದೂರು, ಸ್ವಚ್ಛ ಬ್ರಿಗೇಡ್ ಕಾರ್ಕಳ ಸೇರಿದಂತೆ ಅನೇಕ ಸಂಘ-ಸಂಸ್ಥೆಗಳು ನಿರಂತರವಾಗಿ ತಮ್ಮ ವ್ಯಾಪ್ತಿಯನ್ನು ಸ್ವಚ್ಛಗೊಳಿಸುತ್ತಿದ್ದು, ಗ್ರಾಪಂ, ಜಿಲ್ಲಾಡಳಿತದ ಸ್ವಚ್ಛತಾ ಕಾರ್ಯಕ್ಕೆ ಬಲ ನೀಡುತ್ತಿವೆ.