ಆಳ್ವಾಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ ಸಮಾರಂಭದಲ್ಲಿ ಮುನಿರಾಜ ರೆಂಜಾಳ ಅವರನ್ನು ಸನ್ಮಾನಿಸಲಾಯಿತು. ಪ್ರೀತಂ ಕುಂದರ್, ಪ್ರಶಾಂತ್ ಬಿ. ಮತ್ತಿತರರಿದ್ದರು.
ಮೂಡುಬಿದಿರೆ: ಪಠ್ಯಕ್ಕೆ ಮಾತ್ರ ಸೀಮಿತವಾಗದ ಶಿಕ್ಷಣದೊಂದಿಗೆ ಕಲೆ, ಸಾಹಿತ್ಯ, ಕ್ರೀಡೆ, ಶಿಸ್ತು, ನಾಯಕತ್ವದ ಗುಣಗಳನ್ನು ಬೆಳೆಸಿದಾಗ ವಿದ್ಯಾರ್ಥಿಯ ವ್ಯಕ್ತಿತ್ವ ಪರಿಪೂರ್ಣವಾಗುತ್ತದೆ ಎಂದು ಜೈನ ಪ್ರೌಢಶಾಲೆ ನಿವೃತ್ತ ಮುಖ್ಯ ಶಿಕ್ಷಕ ಮುನಿರಾಜ ರೆಂಜಾಳ ಹೇಳಿದರು.
ಪುತ್ತಿಗೆಯ ವಿವೇಕಾನಂದ ನಗರದಲ್ಲಿರುವ ಆಳ್ವಾಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಶನಿವಾರ ಶಾಲಾ ವಿದ್ಯಾರ್ಥಿ ಸಂಸತ್ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಡಾ.ಆಳ್ವ ಅವರ ದೂರದೃಷ್ಟಿಯ ಶಿಕ್ಷಣ ಪರಿಕಲ್ಪನೆಯಿಂದ ಶಾಲೆ ರಾಜ್ಯದ ಮಾದರಿ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿ ರೂಪುಗೊಂಡಿದೆ. ಶಿಕ್ಷಣದ ನಿಜವಾದ ಉದ್ದೇಶ ಉತ್ತಮ ಅಂಕಗಳನ್ನು ಗಳಿಸುವುದಷ್ಟೆ ಅಲ್ಲ, ಉತ್ತಮ ವ್ಯಕ್ತಿತ್ವವನ್ನು ರೂಪಿಸುವುದಾಗಿದೆ ಎಂದರು.
ಮುನಿರಾಜ ರೆಂಜಾಳ ಅವರನ್ನು ಸನ್ಮಾನಿಸಲಾಯಿತು. ಆಡಳಿತಾಧಿಕಾರಿ ಪ್ರೀತಂ ಕುಂದರ್ ಅಧ್ಯಕ್ಷತೆ ವಹಿಸಿದ್ದರು. ಗುರುಪ್ರಸಾದ್, ರಾಜೇಶ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಪ್ರಶಾಂತ್ ಬಿ. ಪ್ರಸ್ತಾವನೆಗೈದರು. ಸಿಂಚನಾ ಹಿರೇಮಠ ಸ್ವಾಗತಿಸಿದರು. ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು. ಸಿದ್ದಾರೂಡ ವಂದಿಸಿದರು.