ಕ್ರೀಡಾ ಚಟುವಟಿಕೆಯಿಂದ ದೈಹಿಕ ಕ್ಷಮತೆ

 ಕುಂದಾಪುರ ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ನಡೆಯಿತು. ಪ್ರಮುಖರಾದ ಹರಿಪ್ರಸಾದ್ ರೈ, ಡಾ.ಕೆ.ಉಮೇಶ, ಡಾ.ಚೇತನ ಶೆಟ್ಟಿ ಕೋವಾಡಿ, ರಕ್ಷಿತ್ ರಾವ್ ಗುಜ್ಜಾಡಿ, ರೇಷ್ಮಾ ಶೆಟ್ಟಿ, ನಿಶಾಂತ ಡಿಸೋಜ, ಅಭಿಷೇಕ್ ಉಪಸ್ಥಿತರಿದ್ದರು.

Published on

ಕುಂದಾಪುರ: ಕ್ರೀಡಾ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸುವ ಮೂಲಕ ದೈಹಿಕ ಕ್ಷಮತೆಯೊಂದಿಗೆ ಮಾನಸಿಕ ಕ್ಷಮತೆ ಮೈಗೂಡಿಸಿಕೊಳ್ಳಬೇಕು. ಪದವಿ ಶಿಕ್ಷಣ ಜತೆಗೆ ನಾಯಕತ್ವ, ಸಹಾಯ, ಸಹಕಾರ ಮನೋಭಾವದೊಂದಿಗೆ ದೇಶಪ್ರೇಮ ಬೆಳೆಸಿಕೊಳ್ಳಬೇಕು ಎಂದು ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಶನ್ ಅಧ್ಯಕ್ಷ ಹರಿಪ್ರಸಾದ್ ರೈ ಹೇಳಿದರು.

ಕುಂದಾಪುರ ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ 2026-27ನೇ ಸಾಲಿನ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು.
ಕಾಲೇಜು ಪ್ರಾಂಶುಪಾಲ ಡಾ.ಕೆ.ಉಮೇಶ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ಡಾ.ಚೇತನ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಅಧಿಕಾರಿಗಳಾದ ರಕ್ಷಿತ್ ರಾವ್ ಗುಜ್ಜಾಡಿ, ರೇಷ್ಮಾ ಶೆಟ್ಟಿ, ಕ್ರೀಡಾ ಪ್ರತಿನಿಧಿ ನಿಶಾಂತ ಡಿಸೋಜ, ಸಾಂಸ್ಕೃತಿಕ ಪ್ರತಿನಿಧಿ ಅಭಿಷೇಕ್ ಉಪಸ್ಥಿತರಿದ್ದರು.
ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಕಾರ್ಯದರ್ಶಿ ವಿಕಾಸ ಶೆಟ್ಟಿ ಪ್ರತಿಜ್ಞಾ ವಿಧಿ ಬೋಧಿಸಿದರು. ಎಸ್‌ಕ್ಯೂಎಸಿ ಪ್ರತಿನಿಧಿ ಖುಷಿ ಶೆಟ್ಟಿ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಕಾರ್ಯಕ್ರಮಗಳನ್ನು ವಿವರಿಸಿದರು. ವಿದ್ಯಾರ್ಥಿಗಳಾದ ಮನೀಷಾ ಪ್ರಾರ್ಥಿಸಿದರು. ಪ್ರಥಾ ಆರ್.ಶೆಟ್ಟಿ ಸ್ವಾಗತಿಸಿದರು. ರಾಕೇಶ್ ವಂದಿಸಿದರು. ರಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net