ಬೈಕ್‌ಗೆ ಕಾರು ಡಿಕ್ಕಿಯಾಗಿ ಸಹಸವಾರ ಸಾವು

ACCIDENT
ACCIDENT
Published on: 

ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿಯಲ್ಲಿ ಭಾನುವಾರ ಬೈಕ್‌ಗೆ ಕಾರು ಹಿಂದಿನಿಂದ ಡಿಕ್ಕಿಯಾಗಿ ಬೈಕ್ ಸಹಸವಾರ ವಿಜಯಪುರ ಮೂಲದ ಸುನೀಲ್ ಪಾಟೀಲ್(19) ಎಂಬುವರು ಮೃತಪಟ್ಟು, ಸವಾರ ಶಿರ್ವದ ಅನಂತಪದ್ಮನಾಭ ಭಟ್ ಗಂಭೀರ ಗಾಯಗೊಂಡಿದ್ದಾರೆ.

ವೈಯಕ್ತಿಕ ಕೆಲಸದ ನಿಮಿತ್ತ ಅನಂತಪದ್ಮನಾಭ ಭಟ್ ಅವರು ತನ್ನ ಮನೆಯಲ್ಲಿ ವಾಸವಾಗಿದ್ದ ಸುನೀಲ್ ಅವರನ್ನು ಸಹಸವಾರರನ್ನಾಗಿ ಕುಳ್ಳಿರಿಸಿಕೊಂಡು ಬೈಕ್‌ನಲ್ಲಿ ತೆರಳುತ್ತಿದ್ದಾಗ ಅಪಘಾತ ನಡೆದಿದೆ. ಘಟನೆಯಿಂದ ಸುನೀಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡ ಅನಂತಪದ್ಮನಾಭ ಉಡುಪಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net