ಮೂರು ಗಿಡ ನೆಟ್ಟು ಪ್ರಕೃತಿಗೆ ಕೊಡುಗೆ ನೀಡಿ

 ಹಳೆಕೋಟೆ ಸಯ್ಯದ್ ಮದನಿ ವಿದ್ಯಾಸಂಸ್ಥೆಯಲ್ಲಿ ಗಿಡ ನೆಟ್ಟು ವನಮಹೋತ್ಸವ ಆಚರಿಸಲಾಯಿತು. ಹಳೆಕೋಟೆ ಮಸ್ಜಿದುಲ್ ಕರೀಂ ಅಧ್ಯಕ್ಷ ಮೊಹಮ್ಮದ್ ತ್ವಾಹ, ಉಳ್ಳಾಲ ನಗರಸಭಾ ಪೌರಾಯುಕ್ತ ಸಂತೋಷ್ ಎಸ್.ಡಿ., ಶಾಲಾ ಸಂಚಾಲಕ ಇಸ್ಮಾಯಿಲ್ ಹಾಜಬ್ಬ, ಜೈನುದ್ದೀನ್ ಇನ್ನಿತರರು ಉಪಸ್ಥಿತರಿದ್ದರು.
ಹಳೆಕೋಟೆ ಸಯ್ಯದ್ ಮದನಿ ವಿದ್ಯಾಸಂಸ್ಥೆಯಲ್ಲಿ ಗಿಡ ನೆಟ್ಟು ವನಮಹೋತ್ಸವ ಆಚರಿಸಲಾಯಿತು. ಹಳೆಕೋಟೆ ಮಸ್ಜಿದುಲ್ ಕರೀಂ ಅಧ್ಯಕ್ಷ ಮೊಹಮ್ಮದ್ ತ್ವಾಹ, ಉಳ್ಳಾಲ ನಗರಸಭಾ ಪೌರಾಯುಕ್ತ ಸಂತೋಷ್ ಎಸ್.ಡಿ., ಶಾಲಾ ಸಂಚಾಲಕ ಇಸ್ಮಾಯಿಲ್ ಹಾಜಬ್ಬ, ಜೈನುದ್ದೀನ್ ಇನ್ನಿತರರು ಉಪಸ್ಥಿತರಿದ್ದರು.
Published on
ವಿಜಯವಾಣಿ ಸುದ್ದಿಜಾಲ ಉಳ್ಳಾಲ
ತಾಯಿಯ ಹೆಸರಲ್ಲಿ ಗಿಡ ನೆಟ್ಟು ಪೋಷಿಸಬೇಕು ಎನ್ನುವುದು ಸರ್ಕಾರದ ನಿಯಮ. ಆದರೆ ನಮ್ಮ ಜೀವನದಲ್ಲಿ ತಂದೆ, ತಾಯಿ ಜತೆ ಗುರುಗಳ ಪಾತ್ರವೂ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ಮಕ್ಕಳಿಗೆ ಸಾಧ್ಯವಾದರೆ ಮೂರು ಗಿಡಗಳನ್ನು ನೆಟ್ಟು ಪೋಷಿಸಿ ಪ್ರಕೃತಿಗೆ ಕೊಡುಗೆ ನೀಡಬೇಕು ಎಂದು ಹಳೆಕೋಟೆ ಮಸ್ಜಿದುಲ್ ಕರೀಂ ಅಧ್ಯಕ್ಷ ಮೊಹಮ್ಮದ್ ತ್ವಾಹ ಅಭಿಪ್ರಾಯಪಟ್ಟರು.
ಸಯ್ಯದ್ ಮದನಿ ಚಾರಿಟೆಬಲ್ ಟ್ರಸ್ಟ್ ಅಧೀನದ ಹಳೆಕೋಟೆ ಸಯ್ಯದ್ ಮದನಿ ವಿದ್ಯಾಸಂಸ್ಥೆಯಲ್ಲಿ ಗುರುವಾರ ವನಮಹೋತ್ಸವ, ವಿದ್ಯಾರ್ಥಿ ಸರ್ಕಾರದ ಪದಗ್ರಹಣ, ವಿವಿಧ ಸಂಘಗಳ ಉದ್ಘಾಟನೆ, ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಉಳ್ಳಾಲ ನಗರಸಭಾ ಪೌರಾಯುಕ್ತ ಸಂತೋಷ್ ಎಸ್.ಡಿ., ಯೂನಿಯನ್ ಬ್ಯಾಂಕ್ ಮುಖ್ಯ ಕಚೇರಿಯ ಮಾರುಕಟ್ಟೆ ವ್ಯವಸ್ಥಾಪಕಿ ಗ್ರೇಸಿ ಲೋಬೋ, ಫಳ್ನೀರ್ ಶಾಖಾ ವ್ಯವಸ್ಥಾಪಕ ಅಭಿಲಾಷ್ ಟಿ., ಸಯ್ಯದ್ ಮದನಿ ಚಾರಿಟೆಬಲ್ ಟ್ರಸ್ಟ್ ಕೋಶಾಧಿಕಾರಿ ಅಬೂಬಕ್ಕರ್, ಪರಿಸರ ಪ್ರೇಮಿ ಮಾಧವ ಉಳ್ಳಾಲ್, ಕ್ಷೇತ್ರ ಶಿಕ್ಷಣ ಸಂಪನ್ಮೂಲ ವ್ಯಕ್ತಿ ಮೋಹನ್ ಕುಮಾರ್, ಎನ್‌ಎಸ್‌ಯುಐ ಪ್ರಧಾನ ಕಾರ್ಯದರ್ಶಿ ಯು.ಟಿ.ಫರೀದ್, ಶಾಲಾ ಸಂಚಾಲಕ ಇಸ್ಮಾಯಿಲ್ ಹಾಜಬ್ಬ, ಶಿಕ್ಷಣ ಪ್ರೇಮಿ ಜೈನುದ್ದೀನ್, ಎಂ.ಎಚ್.ಇಬ್ರಾಹಿಂ, ಹಳೇ ವಿದ್ಯಾರ್ಥಿ ಶುಕೂರ್ ಮೊದಲಾದವರು ಉಪಸ್ಥಿತರಿದ್ದರು. ಸಂಸ್ಥೆಯ ಮುಖ್ಯ ಶಿಕ್ಷಕ ಕೆಎಂಕೆ ಮಂಜನಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಶಿಕ್ಷಕಿಯರಾದ ಸಪ್ನಾ ವಂದಿಸಿದರು. ದಾಮಿನಿ ಕಾರ್ಯಕ್ರಮ ನಿರೂಪಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net