ವಾಣಿ ಕಾಲೇಜಿನಲ್ಲಿ ‘ಆಟಿದ ಕಲ’ ಸಂಭ್ರಮ

 ಆಟಿದ ಕಲ ಕಾರ್ಯಕ್ರಮವನ್ನು ವಾಣಿ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ಉದ್ಘಾಟಿಸಿದರು. ಕುಶಾಲಪ್ಪ ಗೌಡ, ರವೀಂದ್ರ ಶೆಟ್ಟಿ ಬಳಂಜ, ಉಷಾದೇವಿ ಕಿನ್ಯಾಜೆ ಮತ್ತಿತರರು ಇದ್ದರು.
ಆಟಿದ ಕಲ ಕಾರ್ಯಕ್ರಮವನ್ನು ವಾಣಿ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ಉದ್ಘಾಟಿಸಿದರು. ಕುಶಾಲಪ್ಪ ಗೌಡ, ರವೀಂದ್ರ ಶೆಟ್ಟಿ ಬಳಂಜ, ಉಷಾದೇವಿ ಕಿನ್ಯಾಜೆ ಮತ್ತಿತರರು ಇದ್ದರು.
Published on

ಬೆಳ್ತಂಗಡಿ: ತುಳುನಾಡಿನ ಆಟಿ ತಿಂಗಳ ವಿಶೇಷತೆ, ಸಾಂಪ್ರದಾಯಿಕ ಆಹಾರ ಪದ್ಧತಿ, ಆಚರಣೆಗಳು ಹಾಗೂ ಗ್ರಾಮೀಣ ಸಂಸ್ಕೃತಿಯನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಉದ್ದೇಶದಿಂದ ಹಳೇಕೋಟೆಯಲ್ಲಿರುವ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಆಟಿದ ಕಲ ಕಾರ್ಯಕ್ರಮ ನಡೆಯಿತು.

ವಾಣಿ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ಸಾಂಪ್ರದಾಯಿಕ ಆಟಿ ತಿಂಗಳ ತಿಂಡಿ-ತಿನಿಸುಗಳ ಸ್ಪರ್ಧೆಗಳನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳು ವಿವಿಧ ಬಗೆಯ ಸಾಂಪ್ರದಾಯಿಕ ಆಟಿ ತಿಂಡಿಗಳನ್ನು ತಯಾರಿಸಿ ಪ್ರದರ್ಶಿಸಿದರು.
ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕುಶಾಲಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ರವೀಂದ್ರ ಶೆಟ್ಟಿ ಬಳಂಜ ಆಟಿ ಆಚರಣೆ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನಿರ್ದೇಶಕಿ ಉಷಾದೇವಿ ಕಿನ್ಯಾಜೆ, ನಿವೃತ್ತ ಶಿಕ್ಷಕಿ ಉಮಾ ರಾವ್, ಉದ್ಯಮಿ ದೀಪಾ ಶೆಣೈ, ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ಪ್ರಾಂಶುಪಾಲ ವಿಷ್ಣುಪ್ರಕಾಶ್, ಮುಖ್ಯಶಿಕ್ಷಕ ಲಕ್ಷ್ಮೀನಾರಾಯಣ ಕೆ. ಉಪಸ್ಥಿತರಿದ್ದರು. ಉಪನ್ಯಾಸಕ ಬೆಳಿಯಪ್ಪ ಕೆ. ನಿರೂಪಿಸಿದರು. ವಿಷ್ಣುಪ್ರಕಾಶ್ ಸ್ವಾಗತಿಸಿದರು. ಮೀನಾಕ್ಷಿ ವಂದಿಸಿದರು.
ಆಟಿ ಅಂಗವಾಗಿ ನಡೆದ ವಿವಿಧ ಸಾಂಪ್ರದಾಯಿಕ ಹಾಗೂ ಮನರಂಜನಾ ಕ್ರೀಡಾ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಗೆ ತೊಟ್ಟು ಸಂಭ್ರಮಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net