ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಎಸ್‌ಐ ಲೋಲಾಕ್ಷ ಕೆ. ತುಂಬೆ, ರಾಮಲ್ ಕಟ್ಟೆ, ಪುದು ಭಾಗದಲ್ಲಿ ರೌಂಡ್ಸ್ ಕರ್ತವ್ಯದಲ್ಲಿ ಇದ್ದ ವೇಳೆ ಹಣ ಪಣವಾಗಿಟ್ಟು ಕೋಳಿ ಅಂಕ ಜುಗಾರಿ ನಡೆಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯಂತೆ ಬೀಟ್ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ 5-6 ಜನರ ಗುಂಪು ಪರವಾನಗಿರಹಿತ ಕೋಳಿ ಅಂಕ ನಡೆಸುತ್ತಿದ್ದರು. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.