ಕೋಳಿ ಅಂಕಕ್ಕೆ ಪೊಲೀಸರ ದಾಳಿ

Arrest
Arrest
Published on

ಬಂದಾರು ಗ್ರಾಮದ ನಿರ್ಮುಡ ಎಂಬಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬೀಟ್ ಸಿಬ್ಬಂದಿಯ ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ಸಬ್ ಇನ್‌ಸ್ಪೆಕ್ಟರ್ ಸಮರ್ಥ್ ಆರ್.ಗಾಣಿಗೇರ ನೇತೃತ್ವದಲ್ಲಿ ದಾಳಿ ನಡೆಸಿದಾಗ ಪೊಲೀಸರನ್ನು ಕಂಡು ಕೆಲವರು ಪರಾರಿಯಾದರು.

ಧರ್ಣಪ್ಪ ಗೌಡ(38) ಹಾಗೂ ಹರೀಶ್ ಎಸ್.(30) ಎಂಬುವರನ್ನು ಬಂಧಿಸಲಾಗಿದೆ. 350 ರೂ. ನಗದು, ಎರಡು ಬಾಳು(ಸಣ್ಣ ಕತ್ತಿ), ವಿವಿಧ ಜಾತಿಯ ನಾಲ್ಕು ಕೋಳಿಗಳು ಹಾಗೂ ಮೂರು ದ್ವಿಚಕ್ರ ವಾಹನಗಳು ಸೇರಿದಂತೆ ಒಟ್ಟು 74,370 ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net