ಜಿಲ್ಲೆಯಲ್ಲಿ ಒಟ್ಟು 1112 ಮತಗಟ್ಟೆಗಳಿದ್ದು, 733 ಮತಗಟ್ಟೆಗಳಲ್ಲಿ ಶೇ. 100ರಷ್ಟು ಡಿಜಿಟಲಿಕರಣ ಪ್ರಕ್ರಿಯೆ ಪೂರ್ಣಗೊಳಿಸಿದ್ದು, ಇವುಗಳಲ್ಲಿ 562 ಮತಗಟ್ಟೆಗಳಲ್ಲಿ ವೆರಿಫಿಕೇಷನ್ ಪ್ರಕ್ರಿಯೆ ಪೂರ್ಣಗೊಂಡಿದೆ. 171 ಮತಗಟ್ಟೆಗಳಲ್ಲಿ ಅಲ್ಪ ಪ್ರಮಾಣದ ವೆರಿಫಿಕೇಷನ್ ಬಾಕಿ ಇದೆ. ಇದು ತ್ವರಿತಗತಿಯಲ್ಲಿ ಆಗಬೇಕಿದೆ ಎಂದರು. ಜಿಲ್ಲೆಯಲ್ಲಿ 19,840 ಮತದಾರರು ಮೃತಪಟ್ಟಿರುವುದು ಮನೆ ಭೇಟಿಯ ವೇಳೆ ಕಂಡುಬಂದಿರುತ್ತದೆ. 24,679 ಮತದಾರರು ಖಾಯಂ ಆಗಿ ಬೇರೆ ಕಡೆಗೆ ವರ್ಗಾವಣೆಗೊಂಡಿದ್ದು, 7521 ಮತದಾರರು ದಾಖಲಾತಿ ಮಾಡಿದ್ದಾರೆ ಎಂದರು. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಯಾರೊಬ್ಬ ಮತದಾರರು ಮತದಾರ ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು. ಇದಕ್ಕೆ ರಾಜಕೀಯ ಪಕ್ಷಗಳು, ಬಿ. ಎಲ್. ಓ ಮತ್ತು ಬಿ. ಎಲ್. ಎಗಳು ಕೈಜೋಡಿಸುವುದರೊಂದಿಗೆ ಪೂರ್ಣ ಪ್ರಮಾಣದಲ್ಲಿ ಮತದಾರರ ಕರಡು ಪಟ್ಟಿ ತಯಾರಿಸಲು ಸಹಕಾರ ನೀಡಬೇಕು ಎಂದರು.