ಉಳಿಗ್ರಾಮದ ಬೋಳದಡ್ಕ ನಿವಾಸಿ ಪ್ರಸಾದ್ ಗೌಡ ಮನೆ ಕುಸಿದ ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಮುಖರಾದ ಚಿದಾನಂದ ರೈ, ಸುರೇಶ ಮೈರ, ವಸಂತ ಉಳಿ, ರೋಹಿನಾಥ, ಗುರುಪ್ರಸಾದ್ ನಾಯಕ್ ಇದ್ದರು.
ಬಂಟ್ವಾಳ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಉಳಿ ಗ್ರಾಮದ ಬೋಳದಡ್ಕ ನಿವಾಸಿ ಪ್ರಸಾದ್ ಗೌಡ ಎಂಬುವರ ಮನೆ ಕುಸಿದಿದ್ದು, ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು ಭೇಟಿ ನೀಡಿ ಪರಿಶೀಲಿಸಿದರು.
ಪ್ರಸಾದ್ ಗೌಡ ಹಾಗೂ ಕುಟುಂಬದ ಸದಸ್ಯರ ಯೋಗಕ್ಷೇಮ ವಿಚಾರಿಸಿ ಧೈರ್ಯ ತುಂಬಿದ ಶಾಸಕರು, ಕುಟುಂಬಕ್ಕೆ ಅಗತ್ಯ ನೆರವು ಹಾಗೂ ಸರ್ಕಾರದ ನಿಯಮಾನುಸಾರ ಪರಿಹಾರ ಶೀಘ್ರ ದೊರೆಯುವಂತೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಮಳೆ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಅಪಾಯದ ಸ್ಥಿತಿಯಲ್ಲಿರುವ ಮನೆಗಳ ಬಗ್ಗೆ ಅಧಿಕಾರಿಗಳು ಹೆಚ್ಚಿನ ನಿಗಾ ವಹಿಸಿ, ಸಾರ್ವಜನಿಕರ ಸುರಕ್ಷತೆಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ಪ್ರಮುಖರಾದ ಚಿದಾನಂದ ರೈ, ಸುರೇಶ ಮೈರ, ವಸಂತ ಉಳಿ, ರೋಹಿನಾಥ, ಗುರುಪ್ರಸಾದ್ ನಾಯಕ್, ಗ್ರಾಮ ಆಡಳಿತಾಧಿಕಾರಿ ಚೆನ್ನಬಸಪ್ಪ, ಪಂಚಾಯಿತಿ ಕಾರ್ಯದರ್ಶಿ ಯಶೋಧರ ಶೆಟ್ಟಿ ಇದ್ದರು.