ನೀಟ್ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಮೊಬೈಲ್ ಫೋನ್, ಸ್ಮಾರ್ಟ್ ವಾಚ್, ಕ್ಯಾಲ್ಕುಲೇಟರ್, ಬ್ಲೂಟೂತ್ ಡಿವೈಸ್, ಇಯರ್ ಫೋನ್ಸ್ ಸೇರಿದಂತೆ ಯಾವುದೇ ಇಲೆಕ್ಟ್ರಾನಿಕ್ ಉಪಕರಣ ಮತ್ತು ವಾಲೆಟ್ಸ್, ಹ್ಯಾಂಡ್ ಬ್ಯಾಗ್ ಧರಿಸಿ ಬರುವುದು ನಿಷೇಧ. ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಯಾವುದಾದರೊಂದು ಮೂಲ ಗುರುತಿನ ಚೀಟಿಯೊಂದಿಗೆ (ಕಾಲೇಜಿನ ಗುರುತಿನ ಚೀಟಿ, ಡೆವಿಂಗ್ ಲೈಸೆನ್ಸ್, ಆಧಾರ್ ಕಾರ್ಡ್, ಪಾನ್ ಕಾರ್ಡ್ ಇನ್ನಿತರ ಮೂಲಪ್ರತಿ) ಸೂಚನೆಯಲ್ಲಿ ತಿಳಿಸಿರುವಂತೆ 2 ಭಾವಚಿತ್ರಗಳೊಂದಿಗೆ ಪರೀಕ್ಷೆಗೆ ಹಾಜರಿರಬೇಕು ಎಂದು ಡಿಸಿ ಸ್ವರೂಪಾ ಸೂಚಿಸಿದರು.