ಕ್ಷೇಮಾ ಗ್ರಾಮೀಣ ಆರೋಗ್ಯ ಕೇಂದ್ರಗಳ ಸಂಯೋಜಕ ಮೇಜರ್ ಡಾ.ರಾಘವೇಂದ್ರ ಹುಚ್ಚಣ್ಣವರ, ನಿಟ್ಟೆ ವಿವಿ ಸಮುದಾಯ ದಂತ ವೈದ್ಯಶಾಸ್ತ್ರ ವಿಭಾಗ ಮುಖ್ಯಸ್ಥೆ ಡಾ.ಆಡ್ರಿ ಡಿಕ್ರೂಜ್, ಎಂ.ಎಸ್.ಆರ್.ಎಸ್. ಕಾಲೇಜಿನ ಪ್ರಾಂಶುಪಾಲ ಡಾ.ಮಿಥುನ್ ಚಕ್ರವರ್ತಿ, ಶಿರ್ವ ಗ್ರಾಮೀಣ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸಜ್ಞಾ ಶೆಟ್ಟಿ, ಡಾ.ನಿವೇದಿತಾ ಮೂರ್ತಿ, ಹಿಂದೂ ಪ್ರೌಢಶಾಲೆ ಮುಖ್ಯಶಿಕ್ಷಕಿ ವಸಂತಿ ಉಪಸ್ಥಿತರಿದ್ದರು. ಎನ್‌ಎಸ್‌ಎಸ್ ಅಧಿಕಾರಿ ಡಾ.ಸೋನಾ ಸ್ವಾಗತಿಸಿದರು. ಎನ್‌ಸಿಸಿ ಅಧಿಕಾರಿ ಅನುಶ್ರೀ ವಂದಿಸಿದರು.