ಪ್ರಯಾಣಿಕರಿಗೆ ಅಗತ್ಯ ಸೌಲಭ್ಯ, ಸ್ವಚ್ಛತೆಗೆ ಆದ್ಯತೆ

 ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ ನೀಡಿದರು. ಪ್ರಮುಖರಾದ ಪ್ರಭಾಕರ ಖಜೂರೆ, ಕೃಷ್ಣ ಶೆಟ್ಟಿ ಕಡಬ, ಪ್ರಸಾದ್ ನೆಟ್ಟಣ ಮತ್ತಿತರರು ಉಪಸ್ಥಿತರಿದ್ದರು.
ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ ನೀಡಿದರು. ಪ್ರಮುಖರಾದ ಪ್ರಭಾಕರ ಖಜೂರೆ, ಕೃಷ್ಣ ಶೆಟ್ಟಿ ಕಡಬ, ಪ್ರಸಾದ್ ನೆಟ್ಟಣ ಮತ್ತಿತರರು ಉಪಸ್ಥಿತರಿದ್ದರು.
Published on
ಸುಬ್ರಹ್ಮಣ್ಯ: ಸ್ವಚ್ಛತೆಗೆ ಆದ್ಯತೆ ನೀಡಿ ನಿಲ್ದಾಣವನ್ನು ಉತ್ತಮವಾಗಿ ನಿರ್ವಹಿಸಬೇಕು. ಕಾಲಕಾಲಕ್ಕೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತ ಪ್ರಯಾಣಿಕರಿಗೆ ಬೇಕಾದ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ರೈಲ್ವೆ ನಿಲ್ದಾಣದ ಅಧಿಕಾರಿಗಳಿಗೆ ಶಾಸಕಿ ಭಾಗೀರಥಿ ಮುರುಳ್ಯ ಸೂಚಿಸಿದರು.
ಕಡಬ ತಾಲೂಕಿನ ನೆಟ್ಟಣದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣಕ್ಕೆ ಶಾಸಕಿ ದಿಢೀರ್ ಭೇಟಿ ನೀಡಿದರು. ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ, ರೈಲು ಬಳಕೆದಾರರ ಸಂಘದ ಅಧ್ಯಕ್ಷ ಪ್ರಸಾದ್ ನೆಟ್ಟಣ ನೀಡಿದ ಮಾಹಿತಿಯಂತೆ ರೈಲು ನಿಲ್ದಾಣಕ್ಕೆ ಭೇಟಿ ನೀಡಿದ ಶಾಸಕಿ ಭಾಗೀರಥಿ ಮುರುಳ್ಯ ಅಧಿಕಾರಿಗಳಿಂದ ಮಾಹಿತಿ ಪಡೆದರು.
ರೈಲು ನಿಲ್ದಾಣಕ್ಕೆ ತಿಂಗಳಿಗೊಮ್ಮೆ ನೀವು ಅಥವಾ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಕಡಬ ತಹಸೀಲ್ದಾರ್‌ಗೆ ಸೂಚಿಸಿದ ಶಾಸಕಿ, ಪ್ರಯಾಣಿಕರ ವಿಶ್ರಾಂತಿಗೃಹಕ್ಕೆ ತೆರಳಿದರು. ಮಹಿಳಾ ವಿಶ್ರಾಂತಿಗೃಹದಲ್ಲಿ ಪುರುಷರು ಇರುವುದನ್ನು ಕಂಡು ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ಇದ್ದರೂ ಈ ರೀತಿ ಅವ್ಯವಸ್ಥೆ ಯಾಕೆಂದು ಅಧಿಕಾರಿಗಳನ್ನು ಪ್ರಶ್ನಿಸಿದರು. ಭದ್ರತಾ ಸಿಬ್ಬಂದಿ ನಿಯೋಜಿಸಲು ಸೂಚಿಸಿದರು. ಬಳಿಕ ನಿಲ್ದಾಣದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.
ಕಡಬ ತಹಸೀಲ್ದಾರ್ ಪ್ರಭಾಕರ ಖಜೂರೆ, ಜಿಪಂ ಮಾಜಿ ಸದಸ್ಯ ಕೃಷ್ಣ ಶೆಟ್ಟಿ ಕಡಬ, ಬಿಳಿನೆಲೆ ಸಿಎ ಬ್ಯಾಂಕ್ ಅಧ್ಯಕ್ಷ ವಾಡ್ಯಪ್ಪ ಗೌಡ, ಕೊಂಬಾರು ಗ್ರಾಪಂ ಮಾಜಿ ಅಧ್ಯಕ್ಷ ಮಧುಸೂದನ್, ಪ್ರಮುಖರಾದ ಕಿಶೋರ್ ಶಿರಾಡಿ, ಪ್ರಸಾದ್ ನೆಟ್ಟಣ, ದೀಕ್ಷಿತ್ ಮತ್ತಿತರರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net