ಗ್ರಾಮೀಣ ಪತ್ರಕರ್ತರ ಸೌಲಭ್ಯಗಳಿಗೆ ಆದ್ಯತೆ

 ಪದಗ್ರಹಣ ಸಮಾರಂಭವನ್ನು ಧರ್ಮದರ್ಶಿ ರಾಜೇಶ್‌ನಾಥ್‌ಜಿ ಉದ್ಘಾಟಿಸಿದರು. ಪ್ರಮುಖರಾದ ಶ್ರೀನಿವಾಸ ನಾಯಕ್ ಇಂದಾಜೆ, ಬಿ.ಎನ್.ಪುಷ್ಪರಾಜ್, ಶರೀಫ್ ಜಟ್ಟಿಪಳ್ಳ, ಸಿದ್ದಿಕ್ ನೀರಾಜೆ, ಗಿರೀಶ್ ಅಡ್ಪಂಗಾಯ ಮತ್ತಿತರರು ಉಪಸ್ಥಿತರಿದ್ದರು.
ಪದಗ್ರಹಣ ಸಮಾರಂಭವನ್ನು ಧರ್ಮದರ್ಶಿ ರಾಜೇಶ್‌ನಾಥ್‌ಜಿ ಉದ್ಘಾಟಿಸಿದರು. ಪ್ರಮುಖರಾದ ಶ್ರೀನಿವಾಸ ನಾಯಕ್ ಇಂದಾಜೆ, ಬಿ.ಎನ್.ಪುಷ್ಪರಾಜ್, ಶರೀಫ್ ಜಟ್ಟಿಪಳ್ಳ, ಸಿದ್ದಿಕ್ ನೀರಾಜೆ, ಗಿರೀಶ್ ಅಡ್ಪಂಗಾಯ ಮತ್ತಿತರರು ಉಪಸ್ಥಿತರಿದ್ದರು.
Published on
ಸುಳ್ಯ: ಗ್ರಾಮೀಣ ಭಾಗದ ಪತ್ರಕರ್ತರು ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ಸಿಎಂ ಅವರ ಗಮನಕ್ಕೆ ತರಲಾಗಿದ್ದು, ಗ್ರಾಮೀಣ ಪತ್ರಕರ್ತರಿಗೆ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಬೇಕು ಎಂದು ವಿನಂತಿಸಲಾಗಿದೆ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಹೇಳಿದರು. ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ನೆರವೇರಿಸಿ ಮಾತನಾಡಿದರು.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಬಿ.ಎನ್.ಪುಷ್ಪರಾಜ್ ಅಧ್ಯಕ್ಷತೆ ವಹಿಸಿ, ಪ್ರಮಾಣ ವಚನ ಬೋಧಿಸಿದರು. ಮರ್ಕಂಜ ಶ್ರೀ ಅನ್ನಪೂರ್ಣೇಶ್ವರಿ ಯೋಗೀಶ್ವರ ಸಿದ್ಧಮಠದ ಧರ್ಮದರ್ಶಿ ರಾಜೇಶ್‌ನಾಥ್‌ಜಿ ಕಾರ್ಯಕ್ರಮ ಉದ್ಘಾಟಿಸಿದರು.
ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ ನೇತೃತ್ವದ ಪದಾಧಿಕಾರಿಗಳು ಅಧಿಕಾರ ವಹಿಸಿಕೊಂಡರು. ಆಂಬುಲೆನ್ಸ್ ಚಾಲಕ ಹನೀಫ ಅವರನ್ನು ಸನ್ಮಾನಿಸಲಾಯಿತು. ಸುಳ್ಯ ಪ್ರೆಸ್‌ಕ್ಲಬ್ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ, ಜಿಲ್ಲಾ ಕಾರ್ಯದರ್ಶಿ ಸಿದ್ದಿಕ್ ನೀರಾಜೆ, ಜಿಲ್ಲಾ ಸಮಿತಿ ಸದಸ್ಯ ಗಿರೀಶ್ ಅಡ್ಪಂಗಾಯ ಉಪಸ್ಥಿತರಿದ್ದರು.
ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಜಯಪ್ರಕಾಶ್ ಕುಕ್ಕೆಟ್ಟಿ ಸ್ವಾಗತಿಸಿ, ನಿರ್ದೇಶಕ ಗಂಗಾಧರ ಕಲ್ಲಪಳ್ಳಿ ಪ್ರಸ್ತಾವನೆಗೈದರು, ಕಾರ್ಯದರ್ಶಿ ಪದ್ಮನಾಭ ಸನ್ಮಾನ ಪತ್ರ ವಾಚಿಸಿದರು. ಪ್ರಧಾನ ಕಾರ್ಯದರ್ಶಿ ದಯಾನಂದ ಕೊರತ್ತೋಡಿ ವಂದಿಸಿದರು, ಪೂಜಾಶ್ರೀ ವಿತೇಶ್ ಕೋಡಿ ರೂಪಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net