ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ 5300 ಬಸ್ಗಳು ಒಕ್ಕೂಟದ ವ್ಯಾಪ್ತಿಯಲ್ಲಿದ್ದು, ರಾಜ್ಯ ಸರ್ಕಾರ ಒಂದು ವರ್ಷದ ಹಿಂದೆ 3 ರೂ. ಹಾಗೂ ಕೇಂದ್ರ ಸರ್ಕಾರ 4 ಬಾರಿ 8.17 ರೂಪಾಯಿ ಡಿಸೇಲ್ ದರ ಜಾಸ್ತಿ ಮಾಡಿದೆ. ವಾಹನದ ಬಿಡಿಭಾಗಗಳ ದರ, ಟೈರ್- ಟೈರ್ ರಿಸೋಲಿಂಗ್ ದರ, ಟೋಲ್ ದರ, ನೌಕರರ ವೇತನ, ಸರ್ಕಾರದ ತೆರಿಗೆ ಸಹಿತ ದೈನಂದಿನ ವೆಚ್ಚಗಳಲ್ಲಿ ತೀವ್ರ ಏರಿಕೆಯಾಗಿರುವುದರಿಂದ ಬಸ್ ಟಿಕೆಟ್ ದರ ಹೆಚ್ಚಿಸಲು ನಿರ್ಧರಿಸಲಾಗಿದೆ. ರಾಜ್ಯ ಸರ್ಕಾರದ ಅಧಿಸೂಚನೆ ಸಂಖ್ಯೆ ಟಿಡಿ81ಟಿಡಿಒ2020ರ ಪ್ರಕಾರ ಪ್ರತಿ ಪ್ರಯಾಣಿಕರಿಗೆ 4 ಪೈಸೆಯಂತೆ ಪ್ರತಿ ಕಿ.ಮೀ.ಗೆ ಕನಿಷ್ಟ 0.25 ಪೈಸೆಯವರೆಗೆ ಸೆಸ್ ಹಾಕಲು ಅವಕಾಶವಿದ್ದು, ಹಾಲಿ ದರದ ಮೇಲೆ ಶೇ. 5 ರಿಂದ 8ರವರೆಗೆ ದರ ಪರಿಷ್ಕರಣೆ ಮಾಡಲಾಗಿದೆ. ಪರಿಷತ ದರಗಳ ಅನ್ವಯ ಶಾಲಾ ವಿದ್ಯಾರ್ಥಿಗಳಿಗೆ ಮುಂಚಿತವಾಗಿ ಸಿಗುತ್ತಿದ್ದ ರಿಯಾಯಿತಿ ಮುಂದುವರಿಯಲಿದೆ ಎಂದು ಮಾಹಿತಿ ನೀಡಿದರು. ಕೆನರಾ ಬಸ್ ಮಾಲೀಕರ ಸಂದ ಅಧ್ಯಕ್ಷ ರಾಜವರ್ಮ ಬಲ್ಲಾಳ್, ಉಪಾಧ್ಯಕ್ಷ ಸದಾನಂದ ಛಾತ್ರ ಉಪಸ್ಥಿತರಿದ್ದರು.