ಚಾಲಕನಿಗೆ ಹೃದಯಾಘಾತವುಂಟಾಗಿ ಮಣಿಪಾಲದಲ್ಲಿ ಡಿವೈಡರ್ಗೆ ಢಿಕ್ಕಿ ಹೊಡೆದು ನಿಂತ ಖಾಸಗಿ ಶಾಲಾ ವಾಹನ.
Published on:
Copied
Follow Us
* ಡಿವೈಡರ್ಗೆ ಢಿಕ್ಕಿಯಾದ ವಾಹನ
* ತಪ್ಪಿದ ಭಾರಿ ಅನಾಹುತ
ಉಡುಪಿ: ಶಾಲಾ ವಾಹನ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹಠಾತ್ ಹೃದಯಾಘಾತ ಉಂಟಾಗಿ ನಿಯಂತ್ರಣ ತಪ್ಪಿದ ವಾಹನ ರಸ್ತೆ ಮಧ್ಯೆಯ ಡಿವೈಡರ್ಗೆ ಢಿಕ್ಕಿ ಹೊಡೆದ ಘಟನೆ ಮಣಿಪಾಲದಲ್ಲಿ ಸೋಮವಾರ (ಜೂ.15) ಬೆಳಗ್ಗೆ ನಡೆದಿದೆ.
ಮಣಿಪಾಲದಲ್ಲಿರುವ ಖಾಸಗಿ ಶಾಲೆಗೆ ಸೇರಿದ ಬಸ್ ಅದಾಗಿದ್ದು, ತನ್ನ ರೂಟ್ನಲ್ಲಿ ಇರುವ ವಿದ್ಯಾರ್ಥಿಗಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ ಚಾಲಕ ಸುರೇಶ್ ಸಣ್ಣಕ್ಕಿಬೆಟ್ಟು (54) ಎಂಬವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿತು ಎನ್ನಲಾಗಿದೆ.
ಬಸ್ ಚಾಲನೆಯಲ್ಲಿರುವಾಗಲೇ ತೀವ್ರವಾಗಿ ಅಸ್ವಸ್ಥಗೊಂಡ ಅವರು ಪರಿಸ್ಥಿತಿಯನ್ನು ಅರಿತು ಕೂಡಲೇ ವಾಹನವನ್ನು ರಸ್ತೆ ಬದಿಗೆ ತರುವ ಪ್ರಯತ್ನ ನಡೆಸಿದರು. ಆದರೆ, ನಿಯಂತ್ರಣ ತಪ್ಪಿ ರಸ್ತೆ ಮಧ್ಯೆಯ ಡಿವೈಡರ್ಗೆ ಬಸ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಸಂಭವಿಸಬಹುದಾಗಿದ್ದ ಭಾರಿ ಅನಾಹುತ ಅದೃಷ್ಟವಶಾತ್ ತಪ್ಪಿದೆ. ಬಸ್ ಅಪಘಾತಕ್ಕೊಳಗಾದ ತಕ್ಷಣ ಸ್ಥಳೀಯರು ಹಾಗೂ ಶಾಲಾ ಸಿಬ್ಬಂದಿ ಚಾಲಕನ ನೆರವಿಗೆ ಧಾವಿಸಿದರು. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದರು.