ಉಡುಪಿ: ಕರ್ನಾಟಕದ ಮಹಾಕವಿಯಾಗಿ, ಹಿರಿಯ ಸಾಹಿತಿಯಾಗಿ, ಬಹುಭಾಷಾ ವಿದ್ವಾಂಸರಾಗಿ, ಸ್ವಾತಂತ್ರ್ಯ ಹೋರಾಟಗಾರರಾಗಿ, ಕರ್ನಾಟಕ ಏಕೀಕರಣ ಚಳವಳಿಯಲ್ಲಿ ಮುಂಚೂಣಿ ನಾಯಕರಾಗಿ, ಕಾಸರಗೋಡು ವಿಲೀನೀಕರಣ ಕ್ರಿಯಾ ಸಮಿತಿಯ ಪ್ರಧಾನ ಸಂಚಾಲಕರಾಗಿ ನಿರಂತರ ದುಡಿದವರು ನಾಡೋಜ ಕಯ್ಯಾರ ಕಿಞ್ಞಣ್ಣ ರೈ ಅವರು. ಕನ್ನಡ ಮತ್ತು ತುಳು ಭಾಷೆಗೆ ಅಪಾರ ಕೊಡುಗೆ ನೀಡಿದ ಕಿಞ್ಞಣ್ಣರನ್ನು ಈ ನಾಡಿನ ಜನತೆ ಎಂದಿಗೂ ಮರೆಯಬಾರದು ಎಂದು ತುಳುಕೂಟದ ಅಧ್ಯಕ್ಷ ಬಿ. ಜಯಕರ್ ಶೆಟ್ಟಿ ಇಂದ್ರಾಳಿ ಹೇಳಿದರು.