

ಹರ್ ಘರ್ ಸೂರ್ಯ ಯೋಜನೆಯು ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ದೇಶಾದ್ಯಂತ 1 ಕೋಟಿ ಮನೆಗಳ ಗುರಿ ಹೊಂದಿದ್ದು, 75,012 ಕೋಟಿ ರೂ. ಹಣ ವಿನಿಯೋಗಿಸಲಾಗಿದೆ. ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆಯಡಿ 4,435 ಜನರು ಅರ್ಜಿ ಸಲ್ಲಿಸಿದ್ದು, ಅವರಲ್ಲಿ 4,413 ಜನರಿಗೆ ಆರ್ಥಿಕವಾಗಿ ಅನುಮೋದನೆ ದೊರೆತಿದೆ. 1,592 ಜನರು ವೆಂಡರ್ಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ. 1,222 ಜನರಿಗೆ ಅನುಷ್ಠಾನಗೊಳಿಸಿದ್ದು, 1,135 ಜನರಿಗೆ ಈಗಾಗಲೇ ಸಬ್ಸಿಡಿ ನೀಡಲಾಗಿದೆ.