ಕೋಟ್ಯಂತರ ಗ್ರಾಮೀಣ ಕುಟುಂಬಗಳಿಗೆ ಯೋಜನೆ ಬೆಳಕು

ನೂತನ ಪದಾಧಿಕಾರಿಗಳಿಗೆ ಯೋಜನಾಧಿಕಾರಿ ಮಾಧವ ಗೌಡ ಕೆ. ಅಧಿಕಾರ ಹಸ್ತಾಂತರಿಸಿದರು. ಪ್ರಮುಖರಾದ ಗಿರಿಧರ ಸ್ಕಂಧ, ವಿಮಲಾ ರಂಗಯ್ಯ, ಬಾಲಕೃಷ್ಣ ಗೌಡ ಕೆ. ಮತ್ತಿತರರು ಉಪಸ್ಥಿತರಿದ್ದರು.
ನೂತನ ಪದಾಧಿಕಾರಿಗಳಿಗೆ ಯೋಜನಾಧಿಕಾರಿ ಮಾಧವ ಗೌಡ ಕೆ. ಅಧಿಕಾರ ಹಸ್ತಾಂತರಿಸಿದರು. ಪ್ರಮುಖರಾದ ಗಿರಿಧರ ಸ್ಕಂಧ, ವಿಮಲಾ ರಂಗಯ್ಯ, ಬಾಲಕೃಷ್ಣ ಗೌಡ ಕೆ. ಮತ್ತಿತರರು ಉಪಸ್ಥಿತರಿದ್ದರು.
Published on

ಸುಬ್ರಹ್ಮಣ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇಂದು ಕೋಟ್ಯಂತರ ಗ್ರಾಮೀಣ ಕುಟುಂಬಗಳ ಬದುಕಿಗೆ ಬೆಳಕಾಗಿದೆ. ಪ್ರಗತಿ ಬಂಧು ಎಂಬುವುದು ಶ್ರಮದಾನ ಮತ್ತು ಪರಸ್ಪರ ಸಹಕಾರದ ಮೂಲಕ ಕೃಷಿಕರ ಶ್ರಮ ಹಸನುಗೊಳಿಸಿದ ಅಪೂರ್ವ ಯೋಜನೆ. ಸಣ್ಣ ಉಳಿತಾಯದಿಂದ ತೊಡಗಿ ಇಂದಿನ ಜ್ಞಾನ ವಿಕಾಸದವರೆಗೆ ಗ್ರಾಮೀಣ ಮಹಿಳೆಯರಿಗೆ ಆತ್ಮವಿಶ್ವಾಸ ಹಾಗೂ ಆರ್ಥಿಕ ಭದ್ರತೆ ಕಲ್ಪಿಸಿದೆ ಎಂದು ಸುಳ್ಯ ತಾಲೂಕು ಯೋಜನಾಧಿಕಾರಿ ಮಾಧವ ಗೌಡ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಸುಳ್ಯ ತಾಲೂಕು ಮತ್ತು ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಸುಬ್ರಹ್ಮಣ್ಯ ವಲಯ ಆಶ್ರಯದಲ್ಲಿ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಸುಬ್ರಹ್ಮಣ್ಯ, ಕಲ್ಲಾಜೆ ಮತ್ತು ಕುಲ್ಕುಂದ ಒಕ್ಕೂಟಗಳ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅಧಿಕಾರ ಹಸ್ತಾಂತರಿಸಿ ಮಾತನಾಡಿದರು.
ಸುಳ್ಯ ತಾಲೂಕು ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷೆ ವಿಮಲಾ ರಂಗಯ್ಯ ಅಧ್ಯಕ್ಷತೆ ವಹಿಸಿದ್ದರು. ಕುಲ್ಕುಂದ ಬಸವನಮೂಲೆ ಶೀ ಬಸವೇಶ್ವರ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಗಿರಿಧರ ಸ್ಕಂದ ಉದ್ಘಾಟಿಸಿದರು. ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷ ಸತೀಶ್ ಟಿ.ಎನ್, ಭಜನಾ ಪರಿಷತ್ ವಲಯಾಧ್ಯಕ್ಷ ಚಂದ್ರಶೇಖರ ಕೊಂದಾಳ, ತಾಲೂಕು ಭಜನೋತ್ಸವ ಸಮಿತಿ ಅಧ್ಯಕ್ಷ ಡಾ.ರವಿ ಕಕ್ಕೆಪದವು ಮುಖ್ಯಅತಿಥಿಗಳಾಗಿದ್ದರು.
ವಲಯ ಮೇಲ್ವಿಚಾರಕ ಬಾಲಕೃಷ್ಣ ಗೌಡ ಕೆ., ಸುಬ್ರಹ್ಮಣ್ಯ ಒಕ್ಕೂಟದ ಅಧ್ಯಕ್ಷೆ ಪವಿತ್ರಾ ದಿನೇಶ್, ನೂತನ ಅಧ್ಯಕ್ಷೆ ರತ್ನಾವತಿ, ಕಲ್ಲಾಜೆ ಒಕ್ಕೂಟ ಅಧ್ಯಕ್ಷ ಮೋನಪ್ಪ ಗೌಡ, ಕುಲ್ಕುಂದ ಒಕ್ಕೂಟ ಅಧ್ಯಕ್ಷ ಹರಿಪ್ರಸಾದ್, ನೂತನ ಅಧ್ಯಕ್ಷ ರವಿಚಂದ್ರ ಉಪಸ್ಥಿತರಿದ್ದರು.

ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು, ಭಜನಾ ಪರಿಷತ್‌ನ ಪದಾಧಿಕಾರಿಗಳು, ನವಜೀವನ ಸಮಿತಿಯ ಸದಸ್ಯರನ್ನು ಗೌರವಿಸಲಾಯಿತು. ವಲಯ ಮೇಲ್ವಿಚಾರಕ ಬಾಲಕೃಷ್ಣ ಗೌಡ ಕೆ. ಸ್ವಾಗತಿಸಿದರು. ಜಯಶ್ರೀ ವಂದಿಸಿದರು. ರಾಮಚಂದ್ರ ದೇವರಗದ್ದೆ ನಿರೂಪಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net