ಅಪಪ್ರಚಾರದ ನಡುವೆ ಯೋಜನೆ ಯಶಸ್ಸು

 ಕುಂದಾಪುರದ ತಾಪಂನಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ ನಡೆಯಿತು. ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಅಭಿಜಿತ್ ಪೂಜಾರಿ, ಚಂದ್ರ ಕಾಂಚನ್, ವಾಣಿ ಆರ್.ಶೆಟ್ಟಿ, ಆಶಾ ಕರ್ವಾಲೋ, ನಾರಾಯಣ ಆಚಾರ್ ಉಪಸ್ಥಿತರಿದ್ದರು.
ಕುಂದಾಪುರದ ತಾಪಂನಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ ನಡೆಯಿತು. ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಅಭಿಜಿತ್ ಪೂಜಾರಿ, ಚಂದ್ರ ಕಾಂಚನ್, ವಾಣಿ ಆರ್.ಶೆಟ್ಟಿ, ಆಶಾ ಕರ್ವಾಲೋ, ನಾರಾಯಣ ಆಚಾರ್ ಉಪಸ್ಥಿತರಿದ್ದರು.
Published on
ವಿಜಯವಾಣಿ ಸುದ್ದಿಜಾಲ ಕುಂದಾಪುರ
ಪಂಚ ಗ್ಯಾರಂಟಿ ಯೋಜನೆ ಯಥಾವತ್ತಾಗಿ ಜಾರಿಗೊಳಿಸಿದ್ದು, ವಿರೋಧವಿದ್ದರೂ ಯಾವುದೇ ಯೋಜನೆ ಸ್ಥಗಿತ ಮಾಡದೆ ಇಡೀ ರಾಜ್ಯದಲ್ಲಿ ಅನುಷ್ಠಾನ ಮಾಡಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಅತಿ ಹೆಚ್ಚು ಪ್ರಯೋಜನ ಮತ್ತು ಅನುದಾನ ಕುಂದಾಪುರ ತಾಲೂಕು ಪಡೆದಿದೆ. ಗ್ಯಾರಂಟಿ ಬಗ್ಗೆ ಬಹಳಷ್ಟು ಅಪಪ್ರಚಾರ ನಡೆದಿದ್ದರೂ ಯೋಜನೆ ಯಶಸ್ವಿಯಾಗಿದೆ ಎಂದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಹೇಳಿದರು. ಕುಂದಾಪುರ ತಾಪಂನಲ್ಲಿ ಶನಿವಾರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಸ್ ನಿಲ್ದಾಣ ನಿರುಪಯುಕ್ತ

ಉಡುಪಿಯಿಂದ ಜಡ್ಡಿನಗದ್ದೆ ಕಳೆಸಂಕದವರೆಗೆ ಒಂದು ಸರ್ಕಾರಿ ಬಸ್ ಮಾತ್ರ ಸಂಚರಿಸುತ್ತಿದೆ ಎಂದು ವಸುಂಧರ ಹೆಗ್ಡೆ ತಿಳಿಸಿದರು. ಸರ್ಕಾರಿ ಬಸ್ ವ್ಯವಸ್ಥೆ ಸರಿಪಡಿಸುವಂತೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಸದಸ್ಯ ಜಹೀದ್ ನಾಕುದಾ ಆರೋಪಿಸಿ, ಗಂಗೊಳ್ಳಿ- ಬೈಂದೂರು ನಡುವೆ ಸರ್ಕಾರಿ ಬಸ್ ಸಂಚಾರ ಪ್ರಾರಂಭಿಸುವಂತೆ ಮನವಿ ಮಾಡಿದರು. ಬೈಂದೂರಿನಲ್ಲಿ 9 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ನಿರುಪಯುಕ್ತವಾಗಿದೆ ಎಂದು ಸದಸ್ಯ ನಾರಾಯಣ ಆಚಾರ್ ಆರೋಪಿಸಿದರು. ಚಾಲಕ, ನಿರ್ವಾಹಕ, ಮೆಕ್ಯಾನಿಕ್ ಹಾಗೂ ಬಸ್‌ಗಳ ಕೊರತೆಯಿಂದ ಹೊಸ ಮಾರ್ಗದಲ್ಲಿ ಬಸ್ ಓಡಾಟ ಪ್ರಾರಂಭಿಸುವುದು ಸಾಧ್ಯವಿಲ್ಲ ಎಂದು ಕೆಎಸ್‌ಆರ್‌ಟಿಸಿ ಡಿಪೋ ಮ್ಯಾನೇಜರ್ ಉದಯ ಶೆಟ್ಟಿ ತಿಳಿಸಿದರು.
ಸದಸ್ಯರಾದ ಅಭಿಜಿತ್ ಪೂಜಾರಿ, ಚಂದ್ರ ಕಾಂಚನ್, ವಾಣಿ ಆರ್.ಶೆಟ್ಟಿ, ಆಶಾ ಕರ್ವಾಲೋ, ನಾರಾಯಣ ಆಚಾರ್, ಗಣೇಶ್, ಸವಿತಾ ಪೂಜಾರಿ, ಅರುಣ್, ತಾಪಂ ಇಒ ಮಹೇಶ್ ಇದ್ದರು.

ಅನಿಯಮಿತ ವಿದ್ಯುತ್ ಕಡಿತ

ಅನಿಯಮಿತ ವಿದ್ಯುತ್ ಕಡಿತ ಮಾಡಲಾಗುತ್ತಿದೆ. ಮಂಗಳವಾರ ಹೊರತುಪಡಿಸಿ ಉಳಿದ ದಿನ ವಿದ್ಯುತ್ ಕಡಿತದಿಂದ ಮಕ್ಕಳು, ಜನರಿಗೆ ತೊಂದರೆಯಾಗುತ್ತಿದೆ. ಮಕ್ಕಳ ವಿದ್ಯಾಭ್ಯಾಸ ದೃಷ್ಟಿಯಿಂದ ಲೋಡ್ ಶೆಡ್ಡಿಂಗ್ ಮಾಡಬಾರದು ಎಂದು ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ತಿಳಿಸಿದರು. ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆಯದೆ ರಸ್ತೆ ಬದಿಯಲ್ಲಿ ಮನೆ ನಿರ್ಮಾಣವಾಗುತ್ತಿದ್ದರೂ ಮೆಸ್ಕಾಂ ಮೌನ ವಹಿಸಿದೆ ಎಂದು ಸದಸ್ಯ ವಸುಂಧರ ಹೆಗ್ಡೆ ಆರೋಪಿಸಿದರು. ಗಂಗೊಳ್ಳಿಯಲ್ಲಿ ರಾತ್ರಿ ವೇಳೆ ಲೈನ್‌ಮನ್ ನಿಯೋಜನೆ ಮಾಡಬೇಕೆಂದು ಜಹೀರ್ ನಾಕುದಾ ಒತ್ತಾಯಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net