ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲ, ಮಾರಾಟ

ಉಡುಪಿಯ ಜೋಡು ಕಟ್ಟೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಿತು. ಕೆ.ಜಯಪ್ರಕಾಶ್ ಹೆಗ್ಡೆ, ಎಂ.ಎ. ಗಫೂರ್, ಅಶೋಕಕುಮಾರ್ ಕೊಡವೂರು, ಗೋಪಾಲ್ ಪೂಜಾರಿ, ರಮೇಶ್ ಕಾಂಚನ್,  ಜ್ಯೋತಿ ಹೆಬ್ಬಾರ್, ಕಿಶನ್ ಹೆಗ್ಡೆ ಕೊಳ್ಳೆಬೈಲು, ಪ್ರಸಾದ ರಾಜ್ ಕಾಂಚನ್, ಉದಯ್ ಕುಮಾರ್ ಮುನಿಯಾಲು, ಹರೀಶ್ ಕಿಣಿ ಇತರರಿದ್ದರು.
ಉಡುಪಿಯ ಜೋಡು ಕಟ್ಟೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಿತು. ಕೆ.ಜಯಪ್ರಕಾಶ್ ಹೆಗ್ಡೆ, ಎಂ.ಎ. ಗಫೂರ್, ಅಶೋಕಕುಮಾರ್ ಕೊಡವೂರು, ಗೋಪಾಲ್ ಪೂಜಾರಿ, ರಮೇಶ್ ಕಾಂಚನ್, ಜ್ಯೋತಿ ಹೆಬ್ಬಾರ್, ಕಿಶನ್ ಹೆಗ್ಡೆ ಕೊಳ್ಳೆಬೈಲು, ಪ್ರಸಾದ ರಾಜ್ ಕಾಂಚನ್, ಉದಯ್ ಕುಮಾರ್ ಮುನಿಯಾಲು, ಹರೀಶ್ ಕಿಣಿ ಇತರರಿದ್ದರು.
Published on

ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಆರೋಪ

* ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಉಡುಪಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಕೇಂದ್ರ ಬಿಜೆಪಿ ಸರ್ಕಾರ ಮರು ಪರೀಕ್ಷೆಯ ಮೂಲಕ ವಿದ್ಯಾರ್ಥಿಗಳಿಗೆ ಪರೀಕ್ಷೆಯ ಹೊರೆ ಹಾಕಿದೆ. ಮುಂದಿನ ವರ್ಷದಿಂದ ರಾಜ್ಯಮಟ್ಟದಲ್ಲಿಯೇ ನೀಟ್ ನಡೆಸಿ ರಾಜ್ಯದ ಮಕ್ಕಳಿಗೆ ಪರೀಕ್ಷೆ ಬರೆಯಲು ಸೀಟು ಸಿಗುವಂತಾಗಬೇಕು. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದಲ್ಲ, ಮಾರಾಟ ಮಾಡಲಾಗಿದೆ ಎಂದು ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಆರೋಪಿಸಿದರು.
ಕೇಂದ್ರ ಸರ್ಕಾರದ ಎಸ್ಐಆರ್ ಪ್ರಕ್ರಿಯೆ, ನೀಟ್ ಹಗರಣ ಹಾಗೂ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪೆಟ್ರೋಲ್, ಡೀಸೆಲ್, ಗ್ಯಾಸ್
ಬೆಲೆ ಏರಿಕೆ ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಉಡುಪಿಯ ಜೋಡುಕಟ್ಟೆ ಬಳಿ ಶನಿವಾರ ಆಯೋಜಿಸಿದ್ದ ಪ್ರತಿಭಟನಾ ಸಭೆ ಉದ್ದೇಶಿಸಿ ಮಾತನಾಡಿ, ಪ್ರಶ್ನೆ ಪತ್ರಿಕೆ ಮಾರಾಟ ಮಾಡಿದವರಿಗೂ ಶಿಕ್ಷೆಯಾಗಲಿ ಎಂದರು.
ಆರ್ಥಿಕ ಸಂಕಷ್ಟ 
ಕಚ್ಚಾ ತೈಲಗಳ ಬೆಲೆ ಏರಿಕೆಯಾಗಲು ಕೇಂದ್ರ ಸರ್ಕಾರದ ಧೋರಣೆಯೇ ಕಾರಣ. ದೇಶೀಯ ನೀತಿಯನ್ನು ಜನಸಾಮಾನ್ಯರ ಮೇಲೆ ಹೊರೆಸಬೇಡಿ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರ್ಥಿಕ ನೀತಿ ನೋಡಿ ಕಲಿಯಿರಿ. ಆ ಮೂಲಕ ದೇಶದ ಜನತೆಯನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಿ ಎಂದು ಜಯಪ್ರಕಾಶ್ ಹೆಗ್ಡೆ ಸಲಹೆ ನೀಡಿದರು.

ಹಕ್ಕು ಕದಿಯುವ ಯತ್ನ

ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ಎಸ್ಐಆರ್ ಬಗ್ಗೆ ಮಾತನಾಡಿ, ಕೇಂದ್ರ ಸರ್ಕಾರವು ಜನರ ಮತದಾನದ ಹಕ್ಕು ಕದಿಯಲು ಪ್ರಯತ್ನ ಮಾಡುತ್ತಿದೆ. ಬಿಹಾರದಲ್ಲಿ ಮೂವತ್ತೈದು ಲಕ್ಷ ಮತಗಳು ಕಾಣೆಯಾಗಿದೆ. ಪ್ರಜಾಪ್ರಭುತ್ವದ ಅಂಗ ಸಂಸ್ಥೆಯಾದ ಸಿಬಿಐ ಅನ್ನು ಸಹ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಮತದಾರರ ಪಟ್ಟಿ ಪರಿಷ್ಕರಣೆಯ ಬಗ್ಗೆ ನಾವೆಲ್ಲ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ ಎಂದರು.

ಸೈಕಲ್ ಮೆರವಣಿಗೆ

ಬ್ರಹ್ಮಗಿರಿಯ ಕಾಂಗ್ರೆಸ್ ಭವನದಿಂದ ಆರಂಭವಾದ ಕಾಲ್ನಡಿಗೆ ಮೆರವಣಿಗೆಯು ಬ್ರಹ್ಮಗಿರಿ ಸರ್ಕಲ್ ಮೂಲಕ ಜೋಡುಕಟ್ಟೆಯವರೆಗೆ ಸಾಗಿತು. ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಸದಸ್ಯರು ಸೈಕಲ್‌ ಚಲಿಸುತ್ತ ಮೆರವಣಿಗೆಯಲ್ಲಿ ಪಾಲ್ಗೊಂಡು ಜನರ ಗಮನ ಸೆಳೆದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಂಗ್ರೆಸ್ ನ ಪ್ರಮುಖರಾದ ಗೋಪಾಲ ಪೂಜಾರಿ, ಪ್ರಸಾದ ರಾಜ್ ಕಾಂಚನ್, ಮುನಿಯಾಲು ಉದಯಕುಮಾ‌ರ್ ಶೆಟ್ಟಿ, ಅಲೆವೂರು ಹರೀಶ್ ಕಿಣಿ, ಕಿಶನ್ ಹೆಗ್ಡೆ ಕೊಳ್ಳೆಬೈಲ್, ದಿನೇಶ್ ಪುತ್ರನ್, ಹರಿಪ್ರಸಾದ್ ರೈ, ಕೀರ್ತಿ ಶೆಟ್ಟಿ, ಪ್ರಖ್ಯಾತ್ ಶೆಟ್ಟಿ, ಮಹಾಬಲ ಕುಂದರ್, ಹರೀಶ್ ಕಿಣಿ, ಕೃಷ್ಣ ಶೆಟ್ಟಿ, ಮಂಜುನಾಥ್ ಪೂಜಾರಿ, ದಿನೇಶ್ ಹೆರೂರು ಸಂತೋಷ್ ಕುಮಾರ್, ಗೋಪಿನಾಥ್ ಭಟ್, ಸೌರಭ್ ಬಲ್ಲಾಳ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಜ್ಯೋತಿ ಹೆಬ್ಬಾರ್, ಉಡುಪಿ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್, ನಾಗೇಶ್ ಕುಮಾರ್ ಉದ್ಯಾವರ ಸೇರಿದಂತೆ ಜಿಲ್ಲಾ ಕಾಂಗ್ರೆಸ್ಸಿನ ಕಾರ್ಯಕರ್ತರು ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net