ಕುಂದಾಪುರ: ತಾಲೂಕಿನ ಕೋಟೇಶ್ವರದ ಒಳಪೇಟೆಯಲ್ಲಿ ಪ್ರಮುಖ ರಸ್ತೆಯ ಅಲ್ಲಲ್ಲಿ ಅತಿಕ್ರಮಣವಾಗಿದ್ದು, ಈ ಒತ್ತುವರಿ ಸರಿಪಡಿಸಿ ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ಕ್ರಮ ವಹಿಸಬೇಕೆಂದು ಆಗ್ರಹಿಸಿ ನಾಗರಿಕರು ಕೋಟೇಶ್ವರ ಗ್ರಾ.ಪಂ. ಎದುರು ಪ್ರತಿಭಟನೆ ನಡೆಸಿದರು.
ಒಳಪೇಟೆ ರಸ್ತೆಯಲ್ಲಿ ಸುಗಮ ಸಂಚಾರ ಸಹಿತ ಪಾರ್ಕಿಂಗ್ ಸಮಸ್ಯೆ ಹೆಚ್ಚಿದೆ. ಲೋಕೋಪಯೋಗಿ ಇಲಾಖೆಗೊಳಪಡುವ ರಸ್ತೆಯಾಗಿರುವುದರಿಂದ ನಿಯವಾನುಸಾರ ಒತ್ತುವರಿ ವಾಡಿಕೊಂಡವರಿಗೆ ನೋಟಿಸ್ ನೀಡಿ ಅಗತ್ಯ ಕ್ರಮ ವಹಿಸಬೇಕು. ಸ್ಥಳೀಯ ಗ್ರಾಪಂ ವ್ಯಾಪ್ತಿಗೊಳಪಡುವ ಪ್ರದೇಶದಲ್ಲಿಯೂ ಇಂತಹ ಸಮಸ್ಯೆಗಳಿದ್ದು ಅಧಿಕಾರಿಗಳು ಇಚ್ಛಾಶಕ್ತಿಯಿಂದ ಕೆಲಸ ವಾಡಿದರೆ ಇವೆಲ್ಲವೂ ನಿವಾರಣೆಯಾಗಿ ಜನರಿಗೆ ಅನುಕೂಲವಾಗಲಿದೆ ಎಂದು ಪ್ರತಿಭಟನಕಾರರು ತಿಳಿಸಿದರು.
ಕೋಟೇಶ್ವರ ಗ್ರಾ.ಪಂ. ವಾಜಿ ಅಧ್ಯಕ್ಷ ಕೃಷ್ಣ ಗೊಲ್ಲ, ವಾಜಿ ಸದಸ್ಯ ಲೋಕೇಶ್ ಅಂಕದಕಟ್ಟೆ, ಬೀಜಾಡಿ ಗ್ರಾ.ಪಂ. ವಾಜಿ ಅಧ್ಯಕ್ಷ ಪ್ರಕಾಶ್ ಪೂಜಾರಿ ಬೀಜಾಡಿ, ಸ್ಥಳೀಯ ಪ್ರಮುಖರಾದ ನಾರಾಯಣ ಮೊಗವೀರ, ಮಹೇಶ್ ಶೆಣೈ ಮತ್ತಿತರರಿದ್ದರು.
ಸ್ಥಳಕ್ಕೆ ಆಗಮಿಸಿದ ಪಿಡಬ್ಲುೃಡಿ ಇಲಾಖೆ ಕುಂದಾಪುರ ವಿಭಾಗದ ಕಿರಿಯ ಇಂಜಿನಿಯರ್ ರಾಮು ಶೇಖರ್ ಹೊದ್ಲೂರು ಸ್ಥಳೀಯರ ಸಮಸ್ಯೆ ಆಲಿಸಿದರು. ಕೂಡಲೇ ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಜತೆಗೂಡಿ ಸರ್ವೇ ಕಾರ್ಯ ನಡೆಸಿ ಸಾರ್ವಜನಿಕರ ಸಮಸ್ಯೆಗೆ ಪರಿಹಾರ ನೀಡುವ ಭರವಸೆ ನೀಡಿದರು.
ಕೋಟೇಶ್ವರ ಒಳಪೇಟೆಯಲ್ಲಿ ಕೆಲವೆಡೆ ಅಂಗಡಿ ಕೋಣೆಗಳ ನಿರ್ವಾಣ, ಸಂಚಾರ ದಟ್ಟಣೆ ಸಮಸ್ಯೆ, ರಸ್ತೆ ಜಾಗ ಒತ್ತುವರಿ ವಿಚಾರದಲ್ಲಿ ಸಾರ್ವಜನಿಕರು ದೂರು ಹೇಳಿಕೊಂಡಿದ್ದಾರೆ. ಈ ಬಗ್ಗೆ ಕಂದಾಯ, ಲೋಕೋಪಯೋಗಿ ಇಲಾಖೆ, ಗ್ರಾಮ ಪಂಚಾಯಿತಿ ಜಂಟಿ ಸರ್ವೇ ನಡೆಸಿ, ಗಡಿ ಗುರುತು ವಾಡಿ, ಒತ್ತುವರಿಯಾದ ಜಾಗವಿದ್ದರೆ ಅದನ್ನು ತೆರವುಗೊಳಿಸಲು ತಕ್ಷಣ ಅಗತ್ಯ ಕ್ರಮ ವಹಿಸಲಾಗುವುದು.
— ದಿನೇಶ್ ನಾಯ್ಕ ಕೋಟೇಶ್ವರ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ