

ಮಲ್ಪೆ ಬಂದರಿನಲ್ಲಿ ಹಲ್ಲೆಗೊಳಗಾದ ಕಾರ್ಮಿಕ ಶೇಖ್ ಅಯ್ಯೂಬ್ ವಿರುದ್ಧ ದಾಖಲಿಸಿರುವ ಪ್ರಕರಣ ಹಿಂಪಡೆದು ಸರ್ಕಾರ ಕೂಡಲೇ ಪರಿಹಾರ ಧನ ನೀಡಬೇಕು. ಹಲ್ಲೆ ನಡೆಸಿದ ಮಿಥುನ್ ಕರ್ಕೇರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಮಹಿಳಾ ಕಾರ್ಮಿಕರಿಗೆ ವಿಶೇಷ ಭದ್ರತೆಯ ನಿಯಮಾವಳಿ ರೂಪಿಸಿ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಅಲ್ಲಿ ಯಾವುದೇ ಘಟನೆ ನಡೆದರೂ ಪೊಲೀಸರು ತಕ್ಷಣ ಮಧ್ಯ ಪ್ರವೇಶಿಸಿ ಕಾನೂನು ಕ್ರಮ ಕೈಗೊಳ್ಳಬೇಕು.