ಕಳೆದ ವರ್ಷ ಡಿಸೆಂಬರ್ನಲ್ಲಿ ನಡೆದ ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ ಒಟ್ಟು 65,401 ಮಕ್ಕಳಿಗೆ ಲಸಿಕೆ ಹಾಕಲಾಗಿದ್ದು, ಶೇ.103 ಗುರಿಮೀರಿ ಸಾಧನೆ ಮಾಡಲಾಗಿದೆ. ಪ್ರಸ್ತುತ ಕಾರ್ಯಕ್ರಮಕ್ಕೆ ಜಿಲ್ಲೆಯಲ್ಲಿ ಅಂದಾಜು 63,524 ಮಕ್ಕಳನ್ನು ಗುರುತಿಸಲಾಗಿದ್ದು, ಸಮೀಕ್ಷೆ ಪ್ರಗತಿಯಲ್ಲಿದೆ. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ 668 ಲಸಿಕಾ ಕೇಂದ್ರ ತೆರೆಯಲಾಗುವುದು. ಜತೆಯಲ್ಲಿ 18 ಟ್ರಾನ್ಸಿಟ್ ಬೂತ್, 5 ಮೊಬೈಲ್ ಟೀಮ್, 1,363 ತಂಡ ಹಾಗೂ 155 ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಲಸಿಕಾ ದಿನದಂದು ಲಸಿಕೆ ನೀಡಲು ಗುರುತಿಸಲಾದ ಅಂಗನವಾಡಿ ಹಾಗೂ ಶಾಲೆಗಳಲ್ಲಿ ಕೇಂದ್ರ ತೆರೆಯಲು ಸಿದ್ಧತೆ ಮಾಡಿಕೊಳ್ಳಬೇಕು. ರವಿವಾರ ಆಗಿರುವುದರಿಂದ ರೈಲ್ವೆ ನಿಲ್ದಾಣ, ಎನ್ಎಚ್ ಟೋಲ್ ಗೇಟ್ಗಳಲ್ಲಿ ಬೂತ್ ತೆರೆಯಬೇಕು. ಎಲ್ಲ ಇಲಾಖಾ ಅಧಿಕಾರಿಗಳೂ ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಡಿಸಿ ತಿಳಿಸಿದರು.