2024ರ ಜುಲೈ 20ರಂದು ರಾತ್ರಿ 7.30ರ ವೇಳೆಗೆ ಅಪ್ರಾಪ್ತ ಬಾಲಕ ಬೈಕನ್ನು ಚಲಾಯಿಸಿ ಕರಾಯ ಗ್ರಾಮದ ತುರ್ಕಳಿಕೆ ಎಂಬಲ್ಲಿ ನಿರ್ಲಕ್ಷೃದಿಂದ ಒಂದು ಸ್ಕೂಟರಿಗೆ ಅಪಘಾತ ಉಂಟು ಮಾಡಿದ್ದ. ಪರಿಣಾಮ ಸ್ಕೂಟರ್ ಸವಾರ ಶಿವಾನಂದ ಅವರ ತಲೆಗೆ ಗಂಭೀರ ಗಾಯವಾಗಿ ಮೃತಪಟ್ಟಿದ್ದರು. ಈ ಬಗ್ಗೆ ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆಗಿನ ಪುತ್ತೂರು ಪೊಲೀಸ್ ನಿರೀಕ್ಷಕ ಸತೀಶ್ ಜಿ.ಜೆ. ತನಿಖೆ ನಡೆಸಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದರು.