ಪುಷ್ಪಾನಂದ ಫೌಂಡೇಷನ್​ನಿಂದ ಪ್ರತಿಭಾ ಪುರಸ್ಕಾರ

ಉಡುಪಿ ಶಾಸಕ ಯಶ್​ಪಾಲ್​ ಸುವರ್ಣ.
ಉಡುಪಿ ಶಾಸಕ ಯಶ್​ಪಾಲ್​ ಸುವರ್ಣ.
Published on

ಉಡುಪಿ 

ಶಾಸಕ ಯಶ್​ಪಾಲ್​ ಸುವರ್ಣ ಮಾಹಿತಿ

* ಅರ್ಜಿ ಸಲ್ಲಿಕೆಗೆ ಆ.31 ಕೊನೆಯ ದಿನ

ಉಡುಪಿ: ಕಳೆದ ಶೈಕ್ಷಣಿಕ ಸಾಲಿನ (2025-2026) ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕ ಗಳಿಸಿದ ಉಡುಪಿ ವಿಧಾನಸಭಾ ಕ್ಷೇತ್ರದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುಷ್ಪಾನಂದ ಫೌಂಡೇಷನ್​ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಫೌಂಡೇಷನ್​ನ ಪ್ರವರ್ತಕ ಹಾಗೂ ಉಡುಪಿ ಶಾಸಕ ಯಶ್​ಪಾಲ್​ ಸುವರ್ಣ ತಿಳಿಸಿದ್ದಾರೆ.
ಉಡುಪಿ ವಿಧಾನಸಭಾ ಕ್ಷೇತ್ರದ ಉಡುಪಿ ನಗರಸಭೆ ಹಾಗೂ ಗ್ರಾಪಂ ವ್ಯಾಪ್ತಿಯ ವಿದ್ಯಾರ್ಥಿಗಳು ಈ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಬಹುದು. ಅರ್ಜಿ ಪ್ರತಿಗಳು ಉಡುಪಿಯಲ್ಲಿರುವ 'ಸ್ವರಾಷ್ಟ್ರ ಸೇವಾ' ಶಾಸಕರ ಕಚೇರಿ ಹಾಗೂ ಬ್ರಹ್ಮಾವರ ತಾಲೂಕು ಕಚೇರಿಯಲ್ಲಿರುವ ಶಾಸಕರ ಕಾರ್ಯಾಲಯದಲ್ಲಿ ಲಭ್ಯವಿದೆ.
ಅರ್ಜಿ ಸಲ್ಲಿಕೆಗೆ ಆ.31 ಕೊನೆಯ ದಿನವಾಗಿದೆ. ಮಾಹಿತಿಗಾಗಿ ಮೊ.ಸಂ. 9901190402, 9611817725, 9019566366 ಸಂಪರ್ಕಿಸಬಹುದು ಎಂದು ಶಾಸಕ ಯಶ್​ಪಾಲ್​ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net