ಶಾರದಾ ಕಾಲೇಜಿನಲ್ಲಿ ಗುಣಮಟ್ಟದ ಶಿಕ್ಷಣ

 ಬಸ್ರೂರು ಶ್ರೀ ಶಾರದಾ ಕಾಲೇಜು.
ಬಸ್ರೂರು ಶ್ರೀ ಶಾರದಾ ಕಾಲೇಜು.
Published on
ವಿಜಯವಾಣಿ ಸುದ್ದಿಜಾಲ ಕುಂದಾಪುರ
ಕುಂದಾಪುರ ತಾಲೂಕಿನ ಬಸ್ರೂರು ಹಾಗೂ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸ್ಥಳೀಯ ಮಟ್ಟದಲ್ಲೇ ಗುಣಮಟ್ಟದ ಉನ್ನತ ಶಿಕ್ಷಣ ಒದಗಿಸುವ ಉದ್ದೇಶದಿಂದ 1972ರಲ್ಲಿ ಶಾರದಾ ಕಾಲೇಜು ಟ್ರಸ್ಟ್ ವತಿಯಿಂದ ಸ್ಥಾಪಿತವಾದ ಬಸ್ರೂರು ಶ್ರೀ ಶಾರದಾ ಕಾಲೇಜು ಕಳೆದ 54 ವರ್ಷಗಳಿಂದ ಯಶಸ್ವಿಯಾಗಿ ಗುಣಮಟ್ಟದ ಶಿಕ್ಷಣ ನೀಡುತ್ತಿದೆ.
2026-27ನೇ ಶೈಕ್ಷಣಿಕ ಸಾಲಿಗೆ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದ್ದು, ಬಿ.ಕಾಂ, ಬಿಬಿಎ, ಬಿಸಿಎ ಮತ್ತು ಬಿ.ಎ ಪದವಿ ಕೋರ್ಸ್‌ಗಳಿಗೆ ಅವಕಾಶವಿದೆ. ಜತೆಗೆ ಸಿಎ ಮತ್ತು ಸಿಎಸ್ ಅಧ್ಯಯನಕ್ಕೂ ಅವಕಾಶ ಕಲ್ಪಿಸಲಾಗಿದೆ. ಈ ವರ್ಷದಿಂದ ತಾಂತ್ರಿಕ ಹಾಗೂ ಉದ್ಯೋಗಾಧಾರಿತ ಕೌಶಲಾಭಿವೃದ್ಧಿ ಕೋರ್ಸ್‌ಗಳಾದ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್, ಸೈಬರ್ ಸೆಕ್ಯೂರಿಟಿ, ಡೇಟಾ ಅನಾಲಿಸಿಸ್, ಕ್ಲೌಡ್ ಕಂಪ್ಯೂಟಿಂಗ್, ಅವಿಯೇಷನ್ ಮತ್ತು ಹಾಸ್ಪಿಟಾಲಿಟಿ ವ್ಯಾನೇಜ್‌ಮೆಂಟ್, ರಿಟೇಲ್ ವ್ಯಾನೇಜ್‌ಮೆಂಟ್ ಮತ್ತು ಡಿಜಿಟಲ್ ವಾರ್ಕೆಟಿಂಗ್ ಕೋರ್ಸ್‌ಗಳನ್ನು ಪರಿಚಯಿಸಲಾಗಿದೆ.
ರಾಷ್ಟ್ರೀಯ ವಾನ್ಯತಾ ಮಂಡಳಿ(ನ್ಯಾಕ್)ಯಿಂದ ‘ಬಿ++’ ವಾನ್ಯತೆ ಪಡೆದಿರುವ ಕಾಲೇಜಿನಲ್ಲಿ 17 ಅನುಭವಿ ಬೋಧಕ ಹಾಗೂ 13 ಬೋಧಕೇತರ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಸ್ತುತ ಕಾಲೇಜಿನಲ್ಲಿ 300ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ವಿದ್ಯಾರ್ಜನೆಯಲ್ಲಿ ತೊಡಗಿಕೊಂಡಿದ್ದಾರೆ. ಐದು ದಶಕಗಳ ಇತಿಹಾಸದಲ್ಲಿ ಕಾಲೇಜು ಶೈಕ್ಷಣಿಕ, ಸಾಹಿತ್ಯ, ಸಾಂಸ್ಕೃತಿಕ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ವಾಡಿದ್ದು, ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಾಸಕ್ಕಾಗಿ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ.
ಇತ್ತೀಚೆಗೆ ನಿಧನರಾದ ದಿ.ಬಸೂರು ಅಪ್ಪಣ್ಣ ಹೆಗ್ಡೆ ಅವರ ನಂತರ ಕಾಲೇಜಿನ ಆಡಳಿತ ಮಂಡಳಿ ಸಂಚಾಲಕರಾಗಿ ಅನುಪವಾ ಎಸ್.ಶೆಟ್ಟಿ ಆಯ್ಕೆಯಾಗಿದ್ದು, ಆಡಳಿತ ಮಂಡಳಿ ಮತ್ತು ವಿಶ್ವಸ್ಥ ಮಂಡಳಿ ವಾರ್ಗದರ್ಶನದಲ್ಲಿ ನೂತನ ಪ್ರಾಂಶುಪಾಲ ಡಾ.ದಯಾನಂದ ಎನ್.ಬಾಯರ್ ನೇತೃತ್ವದಲ್ಲಿ ಕಾಲೇಜನ್ನು ಮತ್ತಷ್ಟು ಅಗ್ರಸ್ಥಾನಕ್ಕೆ ಏರಿಸುವ ಕಾರ್ಯ ಯೋಜನೆ ರೂಪಿಸಲಾಗಿದೆ.
ಒಳಾಂಗಣ ಮತ್ತು ಹೊರಾಂಗಣ ಕ್ರೀಡಾಂಗಣಗಳೊಂದಿಗೆ ವೃತ್ತಿಪರ ತರಬೇತಿ ಸೌಲಭ್ಯಗಳಿದ್ದು, ವಿದ್ಯಾರ್ಥಿಗಳು ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ವಾಡುತ್ತಿದ್ದಾರೆ. ದೂರದ ವಿದ್ಯಾರ್ಥಿನಿಯರಿಗಾಗಿ ಹಾಸ್ಟೆಲ್ ಸೌಲಭ್ಯವೂ ಲಭ್ಯವಿದೆ. ಸುಸಜ್ಜಿತ ಕಟ್ಟಡ, ಆಧುನಿಕ ಕಂಪ್ಯೂಟರ್ ಲ್ಯಾಬ್, ವಿಶಾಲ ಕ್ರೀಡಾಂಗಣ ಮತ್ತು ವಾಲಿನ್ಯರಹಿತ ಪರಿಸರ ಹೊಂದಿರುವ ಈ ಕಾಲೇಜನ್ನು ಜಿಲ್ಲೆಯ ವಾದರಿ ಶಿಕ್ಷಣ ಸಂಸ್ಥೆಯನ್ನಾಗಿಸುವ ದಿಸೆಯಲ್ಲಿ ಶಿಕ್ಷಣ ಹಾಗೂ ಇತರ ಕ್ಷೇತ್ರಗಳಲ್ಲಿನ ತಜ್ಞರು ಹಾಗೂ ಅನುಭವಿಗಳ ವಾರ್ಗದರ್ಶನ ಪಡೆದುಕೊಂಡು, ಅನೇಕ ಉನ್ನತೀಕರಣದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಕಾಲೇಜಿನ ಸಂಚಾಲಕಿ ಅನುಪವಾ ಎಸ್.ಶೆಟ್ಟಿ ಮತ್ತು ಟ್ರಸ್ಟಿ ಬಾಂಡ್ಯ ಸುಭಾಶ್ಚಂದ್ರ ಶೆಟ್ಟಿ ತಿಳಿಸಿದ್ದಾರೆ.

ಉಚಿತ ಶಿಕ್ಷಣ

ಮಂಗಳೂರು ವಿಶ್ವವಿದ್ಯಾಲಯದ ಕುಂದಗನ್ನಡ ಅಧ್ಯಯನ ಪೀಠದ ವಿಸ್ತರಣಾ ಕೇಂದ್ರವನ್ನು ಕಾಲೇಜಿನಲ್ಲಿ ಪ್ರಾರಂಭಿಸಲಾಗುತ್ತಿದ್ದು, ಬಸ್ರೂರು ಅಧ್ಯಯನ ಕೇಂದ್ರವನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ. 10 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಮತ್ತು ಕ್ರೀಡೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲಾಗುವುದು.

ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ

ವಿದ್ಯಾರ್ಥಿಗಳು ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆ ವಾಡಿ ವಿವಿಧ ರ‌್ಯಾಂಕ್‌ಗಳನ್ನು ಪಡೆದುಕೊಂಡಿದ್ದಾರೆ. ಇಂಗ್ಲಿಷ್ ಭಾಷಾ ತರಬೇತಿ ಹಾಗೂ ಮಧ್ಯಾಹ್ನ ಉಚಿತ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಶಿಕ್ಷಣ ಜತೆಗೆ ಶಿಕ್ಷಣೇತರ ಚಟುವಟಿಕೆಗಳಿಗೆ ಆದ್ಯತೆ ನೀಡಲಾಗುತ್ತಿದ್ದು, ಸಾಹಿತ್ಯ, ಕ್ರೀಡೆ, ವಿಜ್ಞಾನ ಹಾಗೂ ಸಾವಾಜಿಕ ವಿಷಯಗಳಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ವಿದ್ಯಾರ್ಥಿವೇತನ ಮೂಲಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ.

ಲರ್ನಿಂಗ್ ಸೆಂಟರ್ ನಿರ್ಮಾಣ

ಡಿಜಿಟಲ್ ಸೌಲಭ್ಯಗಳನ್ನು ವಿಸ್ತರಿಸುವ ಉದ್ದೇಶದಿಂದ ಅನುಪವಾ ಎಸ್.ಶೆಟ್ಟಿ ಮತ್ತು ಸುಭಾಶ್ಚಂದ್ರ ಶೆಟ್ಟಿ ಬಾಂಡ್ಯ ಅವರ ಸಹಕಾರದಿಂದ ‘ಬಸ್ರೂರು ಅಪ್ಪಣ್ಣ ಹೆಗ್ಡೆ ಡಿಜಿಟಲ್ ಲರ್ನಿಂಗ್ ಸೆಂಟರ್’ ಸ್ಥಾಪಿಸಲಾಗಿದೆ. ವಿಶಾಲ ಗ್ರಂಥಾಲಯದಲ್ಲಿ 31,972ಕ್ಕೂ ಅಧಿಕ ಪುಸ್ತಕಗಳು, 25 ನಿಯತಕಾಲಿಕೆಗಳು, 10 ದಿನಪತ್ರಿಕೆಗಳು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಗತ್ಯವಾದ ಸಂಪನ್ಮೂಲ ಲಭ್ಯವಿದ್ದು, ಇ-ಲ್ಯಾಬ್ ತಂತ್ರಾಂಶ ಮತ್ತು ಬಾರ್‌ಕೋಡ್ ವ್ಯವಸ್ಥೆ ಜಾರಿಯಲ್ಲಿದೆ. ವೃತ್ತಿ ವಾರ್ಗದರ್ಶನ ಹಾಗೂ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಲಾಗುತ್ತಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net