ಐದೂ ಶಾಲೆಗಳ ಪರವಾಗಿ ಶಿಕ್ಷಕ ನಾರಾಯಣ ದೇವಾಡಿಗ ದಾನಿಗಳಿಗೆ ಕೃತಜ್ಞತೆ ಸಲ್ಲಿಸಿದರು. ಶ್ರೀ ಗುಡೇ ಮಹಾಲಿಂಗೇಶ್ವರ ಸೌಹಾರ್ದ ಸಹಕಾರಿ ಸಂಘ ಉಪಾಧ್ಯಕ್ಷ ಕಿರಣ್ ಶೆಟ್ಟಿ, ನಿರ್ದೇಶಕರಾದ ಬಟ್ನಾಡಿ ಅಣ್ಣಪ್ಪ ಶೆಟ್ಟಿ, ಸುಧಾಕರ ಶೆಟ್ಟಿ, ಸುಭಾಶ್ಚಂದ್ರ ಶೆಟ್ಟಿ, ದೇವಳ ವ್ಯವಸ್ಥಾಪನಾ ಸಮಿತಿ ಸದಸ್ಯ ಜಯಶೀಲ ಶೆಟ್ಟಿ, ಡಾ.ಅತುಲ್ಕುಮಾರ್ ಶೆಟ್ಟಿ, ಕರುಣಾಕರ ಶೆಟ್ಟಿ ಇದ್ದರು. ಶಿಕ್ಷಕ ಜಯಪ್ರಕಾಶ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.