ಕುಂದಾಪುರ: ಹೋಬಳಿಯ ಯಾವುದೇ ಅರ್ಜಿದಾರರು ಸರಿಯಾದ ಪೂರಕ ದಾಖಲೆ ನೀಡಿದ ಹೊರತಾಗಿಯೂ ಸಕಾಲದಲ್ಲಿ ಕಡತ ವಿಲೇವಾರಿ ಆಗದಿದ್ದರೆ ಇಡೀ ತಾಲೂಕು ಕಚೇರಿ ವ್ಯವಸ್ಥೆಗೆ ಕೆಟ್ಟ ಹೆಸರು ಬರುತ್ತದೆ. ಹಾಗಾಗಿ ಯಾವುದೇ ಕಾರಣಕ್ಕೂ ಸಾರ್ವಜನಿಕರ ಅರ್ಜಿ ಬಾಕಿ ಇರಿಸಿಕೊಳ್ಳದೆ ಅಗತ್ಯ ಇದ್ದಲ್ಲಿ ಮಾತ್ರ ಹಿಂಬರಹ ನೀಡಿ, ಉಳಿದಂತೆ ಕಡತಗಳನ್ನು ಅರ್ಜಿದಾರರಿಗೆ ಅನುಕೂಲ ಆಗುವ ದೃಷ್ಟಿಯಲ್ಲಿ ವಿಲೇವಾರಿ ಮಾಬೇಕು. ಮುಖ್ಯವಾಗಿ ಆರ್‌ಟಿಸಿ ಸಮಸ್ಯೆಗಳು, ಭೂ ವ್ಯಾಜ್ಯ, ಅಕ್ರಮ ಸಕ್ರಮ, 94ಸಿ, ಆರ್‌ಆರ್‌ಟಿ ಹಾಗೂ 11 ಈ ಕಡತಗಳನ್ನು ಆದ್ಯತೆಯಲ್ಲಿ ವಿಲೇಗೊಳಿಸುವಂತೆ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಹೇಳಿದರು.