ವಿದ್ಯಾರ್ಥಿಗಳ ನಡುವಿನ ಸಮಸ್ಯೆಯನ್ನು ಶಾಂತಿಯುತವಾಗಿ ಇತ್ಯರ್ಥಪಡಿಸಲು ಗುರುವಾರ ರಕ್ಷಕ-ಶಿಕ್ಷಕ ಸಂಘದ ತುರ್ತು ಸಭೆ ನಡೆಸಿದ್ದು, ಸಭೆ ನಡೆಯುವ ಕೆಲ ಸಮಯ ಮೊದಲು ಹಿರಿಯ ವಿದ್ಯಾರ್ಥಿಗಳ ತಂಡ ರ‌್ಯಾಗಿಂಗ್ ನಡೆಸಿದೆ. ಸಂತ್ರಸ್ತ ವಿದ್ಯಾರ್ಥಿ ಹಾಗೂ ಶಾಲಾ ಅಧಿಕಾರಿಗಳು ಹಿರಿಯ ವಿದ್ಯಾರ್ಥಿಗಳ ಪುಂಡಾಟಿಕೆ ವಿರುದ್ಧ ದೂರು ನೀಡಿದ್ದಾರೆ. ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಯ ಹೇಳಿಕೆ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.