ಕುಂಬಳೆ ಶಾಲಾ ವಿದ್ಯಾರ್ಥಿಗೆ ರ‌್ಯಾಗಿಂಗ್

crime
crime
Published on
ಕಾಸರಗೋಡು: ಕುಂಬಳೆ ಸರ್ಕಾರಿ ಹೈಯರ್ ಸೆಕೆಂಡರಿ ಶಾಲಾ ಒಂಬತ್ತನೇ ತರಗತಿ ವಿದ್ಯಾರ್ಥಿಗೆ ಪೇಟೆಯಲ್ಲಿ ಹಿರಿಯ ವಿದ್ಯಾರ್ಥಿಗಳ ತಂಡವೊಂದು ರ‌್ಯಾಗಿಂಗ್ ನಡೆಸಿ ಥಳಿಸಿದ ಘಟನೆ ನಡೆದಿದೆ.
ಬುಧವಾರ ಸಂಜೆ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಯನ್ನು ಹತ್ತನೇ ತರಗತಿಯ ಹತ್ತರಷ್ಟು ವಿದ್ಯಾರ್ಥಿಗಳು ಹಿಂಬಾಲಿಸಿ ತಡೆಹಿಡಿದು ಥಳಿಸಿದ್ದಾರೆ. ನಂತರ ವಾಹನದ ಕೀಲಿಕೈಯಿಂದ ಚುಚ್ಚಿ ಗಾಯಗೊಳಿಸಿದ್ದಾರೆ.
ಗಾಯಾಳು, ಒಳಯಂ ನಿವಾಸಿಯಾಗಿರುವ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ಪಡೆದು ಪೊಲೀಸರು ಸ್ಥಳಕ್ಕಾಗಮಿಸಿ ವಿದ್ಯಾರ್ಥಿಗಳ ಗುಂಪನ್ನು ಚದುರಿಸಿದ್ದಾರೆ.
ಕಳೆದ ಹಲವು ವರ್ಷಗಳಿಂದ ಕುಂಬಳೆ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿಗಳ ಗುಂಪೊಂದು ಪುಂಡಾಟಿಕೆ ನಡೆಸುತ್ತಾ ಬರುತ್ತಿದ್ದು, ಶಾಲಾ ಅಧಿಕಾರಿಗಳು, ಪಿಟಿಎ ಇಂತಹ ವಿದ್ಯಾರ್ಥಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗದಿರುವುದರಿಂದ ಸಮಸ್ಯೆ ಮರುಕಳಿಸುತ್ತಿರುವುದಾಗಿ ಸ್ಥಳೀಯರು ದೂರಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net