ಎಂಜಿಎಂ ಕಾಲೇಜಿನ ಪ್ರಾಂಶುಪಾಲೆ ಡಾ. ಗಾಯತ್ರಿ ಪೈ ಮಾತನಾಡಿದರು. ರಂಗಭೂಮಿ ಉಡುಪಿ ಪ್ರಧಾನ ಕಾರ್ಯದರ್ಶಿ ಪ್ರದಿಪಚಂದ್ರ ಕುತ್ಪಾಡಿ ಪ್ರಾಸ್ತಾವಿಕ ಮಾತನಾಡಿ, ಜುಲೈ 15ರಂದು ಕೇಂದ್ರ ಸಂಗೀತ ನಾಟಕ ಅಕಾಡೆಮಿ ಕಾಳಿದಾಸ ಜಯಂತಿಯ ಸಂದರ್ಭದಲ್ಲಿ ದೇಶಾದ್ಯಂತ ವಂದೇ ಮಾತರಂ ವಿಚಾರದಲ್ಲಿ ನಾಟಕಗಳು ನಡೆಸಲು ಉದ್ದೇಶಿಸಿದೆ. ಕರ್ನಾಟಕದಲ್ಲಿ ಉಡುಪಿ ಮತ್ತು ಬೆಂಗಳೂರಿನಲ್ಲಿ ನಾಟಕ ಪ್ರದರ್ಶನ ನಡೆಯಲಿದೆ. ಉಡುಪಿಯಲ್ಲಿ ನಾಟಕ ಸಿದ್ಧತೆಗೆ ರಂಗಭೂಮಿ ಉಡುಪಿಗೆ ಅವಕಾಶ ನೀಡಿರುವುದು ಉಡುಪಿಗೆ ಹೆಮ್ಮೆಯ ವಿಷಯ ಎಂದರು. ಕಾರ್ಯಕ್ರಮದಲ್ಲಿ ಎಂಜಿಎಂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲಿ ಮಾಲತಿ ದೇವಿ, ಉಪ ಪ್ರಾಂಶುಪಾಲ ವಿಶ್ವನಾಥ್ ಪೈ, ನಾಟಕದ ನಿರ್ದೇಶಕ ಪ್ರಶಾಂತ್ ಉದ್ಯಾವರ ಉಪಸ್ಥಿತರಿದ್ದರು.