ಚೆರ್ಕಳ- ಉಕ್ಕಿನಡ್ಕ ರಸ್ತೆ ಶೀಘ್ರ ಅಭಿವೃದ್ಧಿ

  ‘ವಿಜಯವಾಣಿ’ ಪ್ರಕಟಿಸಿದ್ದ ವಿಶೇಷ ವರದಿ.
‘ವಿಜಯವಾಣಿ’ ಪ್ರಕಟಿಸಿದ್ದ ವಿಶೇಷ ವರದಿ.
Published on

ವಿಜಯವಾಣಿ ಸುದ್ದಿಜಾಲ ಕಾಸರಗೋಡು

ಚೆರ್ಕಳ-ಕಲ್ಲಡ್ಕ ಅಂತಾರಾಜ್ಯ ಸಂಪರ್ಕದ ಚೆರ್ಕಳದಿಂದ ಉಕ್ಕಿನಡ್ಕವರೆಗಿನ ಸುವಾರು 19 ಕಿ.ಮೀ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಎದುರಾಗಿದ್ದ ತಾಂತ್ರಿಕ ಅಡಚಣೆ ನಿವಾರಣೆಯಾಗಿದ್ದು, ನವೀಕರಣ ಕಾರ್ಯ ಶ್ರೀ ಆರಂಭಗೊಳ್ಳಲಿದೆ ಎಂದು ಶಾಸಕ ವಾಹಿನ್ ಕಲ್ಲಟ್ರ ತಿಳಿಸಿದ್ದಾರೆ.
ಕಾಸರಗೋಡು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕಲ್ಲಡ್ಕ-ಚೆರ್ಕಳ ರಸ್ತೆಯ ನವೀಕರಣ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಯೋಜನಾ ಅನುಷ್ಠಾನ ಸಂಸ್ಥೆಯಾದ ಕೆಆರ್‌ಎಫ್‌ಬಿ ಗೆ ‘ಕಿಫ್ಬಿ’ ಕಾರ್ಯನಿರ್ವಾಹಕ ನಿರ್ದೇಶಕರು ಸೂಚನೆ ನೀಡಿದ್ದಾರೆ. ಟೆಂಡರ್ ಪ್ರಕ್ರಿಯೆಗಳು ಪೂರ್ಣಗೊಂಡಿದ್ದರೂ ತಾಂತ್ರಿಕ ಅಡಚಣೆಗಳಿಂದಾಗಿ ಸ್ಥಗಿತಗೊಂಡಿದ್ದ 29.83 ಕೋಟಿ ರೂ. ಮೊತ್ತದ ಈ ಕಾಮಗಾರಿ ತಕ್ಷಣವೇ ಆರಂಭವಾಗಲಿದೆ ಎಂದು ಶಾಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಳ್ಳತ್ತಡ್ಕ ಪ್ರದೇಶದಲ್ಲಿ ಬೃಹತ್ ಹೊಂಡಗಳು ಸೃಷ್ಟಿಯಾಗಿ ವಾಹನ ಸವಾರರು, ಪ್ರಯಾಣಿಕರು ತೀವ್ರ ಸಮಸ್ಯೆ ಎದುರಿಸುತ್ತಿರುವ ಬಗ್ಗೆ ವಿಜಯವಾಣಿ ‘ಪಳ್ಳತ್ತಡ್ಕದಲ್ಲಿ ಸಂಚಾರ ದುಸ್ತರ’ ಎಂಬ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಿಸಿ ಸರ್ಕಾರದ ಗಮನ ಸೆಳೆದಿತ್ತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net