

ಉಡುಪಿ: ಭಾರತೀಯ ಜನತಾ ಯುವ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆಯಾಗಿ ಯುವ ಚಿಂತಕಿ ಹಾಗೂ ಲೇಖಕಿ ಮಣಿಪಾಲ ಮೂಲದ ರಶ್ಮಿ ಸಾಮಂತ್ ನೇಮಕಗೊಂಡಿದ್ದಾರೆ.
ರಶ್ಮಿ ಸಾಮಂತ್ ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಎಂಜಿನಿಯರಿಂಗ್ ಮುಗಿಸಿದ ಇವರು, ಬಳಿಕ ಬ್ರಿಟನ್ನ ಪ್ರತಿಷ್ಠಿತ ಆಕ್ಸ್ಫರ್ಡ್ ವಿಶ್ವವಿದ್ಯಾಲಯದಲ್ಲಿ ಉನ್ನತ ವ್ಯಾಸಂಗ ಮಾಡಿದ್ದರು. 2021 ರಲ್ಲಿ ಆಕ್ಸ್ಫರ್ಡ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿ ಆಯ್ಕೆಯಾದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದು, ಸಂಪರಿವಾರದ ಸಂಟನೆಗಳಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ. ರಶ್ಮಿ ಅವರಿಗೆ ಪಕ್ಷವು ರಾಷ್ಟ್ರ ಮಟ್ಟದ ಮಹತ್ವದ ಜವಾಬ್ದಾರಿಯನ್ನು ವಹಿಸಿದ್ದು, ರಾಷ್ಟ್ರೀಯ ಕಾರ್ಯಕಾರಿಣಿಯ 34 ಸದಸ್ಯರಲ್ಲಿ ಕರ್ನಾಟಕದ ಏಕೈಕ ಪ್ರತಿನಿಧಿಯಾಗಿದ್ದಾರೆ.