ಸ್ವಂತಿಕೆಯಿಂದ ಸಮಾಜದಲ್ಲಿ ಮನ್ನಣೆ

ವಿಶ್ವ ಬ್ರಾಹ್ಮಣ ಸಭಾಭವನವನ್ನು ಶ್ರೀಮದ್ ಆನೆಗುಂದಿ ಮಹಾ ಸಂಸ್ಥಾನ ಸರಸ್ವತೀ ಪೀಠದ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಮಹಾ ಸ್ವಾಮೀಜಿ ಉದ್ಘಾಟಿಸಿದರು. ಪ್ರಮುಖರಾದ ಕೃಷ್ಣ ಆಚಾರ್ಯ, ವಿ.ಶ್ರೀಧರ ಆಚಾರ್ಯ ವಡೇರಹೋಬಳಿ, ಮುರಹರಿ ಆಚಾರ್ಯ, ಯಶ್‌ಪಾಲ್ ಸುವರ್ಣ, ಕೆ.ರಘುಪತಿ ಭಟ್, ಪ್ರಸಾದ್ ರಾಜ್ ಕಾಂಚನ್, ಮಧು ಆಚಾರ್ಯ, ಅಲೆವೂರು ಯೋಗೀಶ್ ಆಚಾರ್ಯ ಮತ್ತಿತರರು ಇದ್ದರು.

Published on
 ಬ್ರಹ್ಮಾವರ: ಸ್ವಂತ ಮನೆ ಮತ್ತು ಸಭಾಭವನಗಳು ಸಮಾಜದಲ್ಲಿ ಗೌರವ ಹೆಚ್ಚಿಸುತ್ತವೆ ಎಂದು ಶ್ರೀಮದ್ ಆನೆಗುಂದಿ ಮಹಾ ಸಂಸ್ಥಾನ ಸರಸ್ವತೀ ಪೀಠದ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಮಹಾ ಸ್ವಾಮೀಜಿ ಹೇಳಿದರು.
 ಉಪ್ಪೂರು ವಿಶ್ವಬ್ರಾಹ್ಮಣ ಸಮಾಜೋದ್ಧಾರಕ ಸಂಘ ವತಿಯಿಂದ ನರ್ನಾಡುವಿನಲ್ಲಿ ನಿರ್ಮಾಣಗೊಂಡ ವಿಶ್ವ ಬ್ರಾಹ್ಮಣ ಸಭಾಭವನವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದರು.
 ಸಂಘಕ್ಕೆ ಸ್ಥಳದಾನ ಮಾಡಿದ ಶಿಕ್ಷಕ ಧನಂಜಯ ಆಚಾರ್ಯ ದಂಪತಿ ಮತ್ತು ದಾನಿಗಳನ್ನು ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಕೃಷ್ಣ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು.
ಬಾರಕೂರು ಶ್ರೀ ಕಾಳಿಕಾಂಬಾ ದೇವಸ್ಥಾನ ಆಡಳಿತ ಮೊಕ್ತೇಸರ ವಿ.ಶ್ರೀಧರ ಆಚಾರ್ಯ ವಡೇರಹೋಬಳಿ, ಕಟಪಾಡಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಸ್ಥಾನ ಆಡಳಿತ ಮೊಕ್ತೇಸರ ಮುರಹರಿ ಆಚಾರ್ಯ, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಮಾಜಿ ಶಾಸಕ ಕೆ.ರಘುಪತಿ ಭಟ್, ಉಡುಪಿ ಉದ್ಯಮಿ ಪ್ರಸಾದ್ ರಾಜ್ ಕಾಂಚನ್, ವಿಶ್ವಕರ್ಮ ಒಕ್ಕೂಟ ಅಧ್ಯಕ್ಷ ಮಧು ಆಚಾರ್ಯ, ಅಲೆವೂರು ಯೋಗೀಶ್ ಆಚಾರ್ಯ, ಎಸ್.ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರೀಯಲ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಉಪೇಂದ್ರ ಆಚಾರ್ಯ, ಭವಾನಿ ನಾರಾಯಣ ಆಚಾರ್ಯ, ಸಹಕಾರ ರತ್ನ ರಮೇಶ್ ಶೆಟ್ಟಿ ಉಪ್ಪೂರು, ಗ್ರಾಪಂ ಅಧ್ಯಕ್ಷೆ ಗಾಯತ್ರಿ ರಾಜೇಂದ್ರ, ಸಂಧ್ಯಾ ಲಕ್ಷ್ಮಣ ಆಚಾರ್ಯ, ಕಾಳಿಕಾಂಬಾ ಮಹಿಳಾ ಬಳಗ ಅಧ್ಯಕ್ಷೆ ಸುನಂದ ಪದ್ಮನಾಭ ಆಚಾರ್ಯ, ಗ್ರಾಮ ಮೊಕ್ತೇಸರ್ ನಾಗೇಶ್ ಆಚಾರ್ಯ, ವಿಶ್ವಕರ್ಮ ಯುವ ಸಂಘಟನೆ ಅಧ್ಯಕ್ಷ ಪ್ರಭಾಕರ ಆಚಾರ್ಯ, ಪ್ರಶಾಂತ್ ಸುವರ್ಣ, ಜಯಾನಂದ ಆಚಾರ್ಯ, ಯು.ಕರುಣಾಕರ  ರಾವ್, ಶಶಿಧರ ಪುರೋಹಿತ್ ಕಟಪಾಡಿ ಮತ್ತಿತರರು ಉಪಸ್ಥಿತರಿದ್ದರು.  ಹರೀಶ್ ಆಚಾರ್ಯ ಸ್ವಾಗತಿಸಿದರು. ಸುಬ್ರಹ್ಮಣ್ಯ ಆಚಾರ್ಯ ನಿರೂಪಿಸಿದರು. ಯೋಗೀಶ್ ಆಚಾರ್ಯ ವಂದಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net