ಉಡುಪಿಯಲ್ಲಿ ಆಯೋಜಿಸಿದ್ದ ಆರೋಗ್ಯ ಶಿಬಿರವನ್ನು ಬಸ್ರೂರು ರಾಜೀವ್ ಶೆಟ್ಟಿ ಉದ್ಘಾಟಿಸಿದರು. ಡಾ. ಅಶೋಕ್ ಕುಮಾರ್ ವೈ.ಜಿ., ಡಾ. ಅಭಿನಯ್, ಮುರಳೀಧರ್ ಭಟ್, ಪುರುಷೋತ್ತಮ ನಾಯಕ್, ರಾಮಚಂದ್ರ ಪಾಟ್ಕರ್, ಜೀವನ್ ಶೆಟ್ಟಿ, ವಿಠ್ಠಲ್ ಕಾಂಚನ್, ಡಾ. ಗಣನಾಥ್ ಶೆಟ್ಟಿ ಎಕ್ಕಾರು ಇದ್ದರು.
Published on:
Copied
Follow Us
* ಬಸ್ರೂರು ರಾಜೀವ್ ಶೆಟ್ಟಿ ಅನಿಸಿಕೆ
* ಆರೋಗ್ಯ ತಪಾಸಣೆ, ಮಾಹಿತಿ ಶಿಬಿರ
ಉಡುಪಿ: ಮನುಷ್ಯನಿಗೆ ಇಂದು ಸಾಕಷ್ಟು ಪ್ರಮಾಣದಲ್ಲಿ ಆಧುನಿಕ ಸವಲತ್ತು ಲಭ್ಯ ಇರುವುದರಿಂದ ದೈಹಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಎಲ್ಲರೂ ಸಹ ದೇಹದ ಅಂಗಾಂಗಗಳ ರಚನೆ ಮತ್ತು ಕಾರ್ಯನಿರ್ವಹಣೆಯ ಬಗ್ಗೆ ತಿಳಿದುಕೊಳ್ಳುವುದು ಅತಿಮುಖ್ಯ. ಆ ನಿಟ್ಟಿನಲ್ಲಿ ಆರೋಗ್ಯ ಮಾಹಿತಿ ಶಿಬಿರಗಳು ಮಹತ್ವದ್ದಾಗಿದೆ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ರಾಜ್ಯ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಹೇಳಿದರು.
ಉಡುಪಿಯ ಕುಂಜಿಬೆಟ್ಟಿನಲ್ಲಿರುವ ಓಕುಡೆ ಡಯಾಗ್ನೋಸ್ಟಿಕ್ ಸೆಂಟರ್ನಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ, ಲಯನ್ಸ್ ಕ್ಲಬ್ ಉಡುಪಿ ಮಿಡ್ಟೌನ್ ವತಿಯಿಂದ ಆಯೋಜಿಸಿದ್ದ ಫ್ಯಾಟಿ ಲಿವರ್, ಕಣ್ಣು ತಪಾಸಣೆ ಮತ್ತು ಉಚಿತ ಮಾಹಿತಿ ಶಿಬಿರ ಉದ್ಘಾಟಿಸಿ ಮಾತಾನಾಡಿದರು.
ಜಿಲ್ಲಾ ರೆಡ್ ಕ್ರಾಸ್ ಸಭಾಪತಿ ಡಾ. ಅಶೋಕ್ ಕುಮಾರ್ ವೈ.ಜಿ. ಫ್ಯಾಟಿ ಲಿವರ್ ಸಮಸ್ಯೆಯ ವಿಚಾರ ಹಾಗೂ ಸಂಪನ್ಮೂಲ ವ್ಯಕ್ತಿ ಡಾ. ಅಭಿನಯ್ ಅವರು ಕಣ್ಣಿನ ಆರೋಗ್ಯದ ಕುರಿತು ಮಾಹಿತಿ ನೀಡಿದರು. ಕೃಷಿತಜ್ಞ ಮುರಳೀಧರ್ ಭಟ್ ಅವರು ಆರೋಗ್ಯ ಮತ್ತು ಪ್ರಕೃತಿಗೆ ಇರುವ ಸಂಬಂಧ ವಿವರಿಸಿದರು.
ಲಯನ್ಸ್ ಕ್ಲಬ್ ಉಡುಪಿ ಮಿಡ್ಟೌನ್ನ ಅಧ್ಯಕ್ಷ ಪುರುಷೋತ್ತಮ ನಾಯಕ್, ನಿಯೋಜಿತ ಅಧ್ಯಕ್ಷ ರಾಮಚಂದ್ರ ಪಾಟ್ಕರ್, ಕಾರ್ಯದರ್ಶಿ ಜೀವನ್ ಶೆಟ್ಟಿ, ವಿಠ್ಠಲ್ ಕಾಂಚನ್ ಉಪಸ್ಥಿತರಿದ್ದರು.
ರೆಡ್ ಕ್ರಾಸ್ನ ಜಿಲ್ಲಾ ಕಾರ್ಯದರ್ಶಿ ಡಾ. ಗಣನಾಥ್ ಶೆಟ್ಟಿ ಎಕ್ಕಾರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಲಯನ್ಸ್ ಜಿಲ್ಲಾ ಖಜಾಂಚಿ ಸುಬ್ರಹ್ಮಣ್ಯ ಶೇರಿಗಾರ್ ವಂದಿಸಿದರು. ಶಿಬಿರದಲ್ಲಿ ನೂರಕ್ಕೂ ಹೆಚ್ಚು ಫಲಾನುಭವಿಗಳು ಪಾಲ್ಗೊಂಡಿದ್ದರು.