ಕಾಂಗ್ರೆಸ್ ಜನವಿರೋಧಿ ನೀತಿ ಖಂಡಿಸಿ ನಂದಳಿಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆದಿಂಜೆಯಲ್ಲಿ ಪ್ರತಿಭಟನಾ ಸಭೆ ನಡೆಯಿತು. ಪ್ರಮುಖರಾದ ಕುತ್ಯಾರು ನವೀನ್ ಶೆಟ್ಟಿ, ಸೂರ್ಯಕಾಂತ್ ಶೆಟ್ಟಿ, ಜಯರಾಮ್ ಸಾಲ್ಯಾನ್ ಮೊದಲಾದವರಿದ್ದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಸರ್ಕಾರದ ಆಡಳಿತ ವೈಫಲ್ಯಗಳಿಂದ ಜನಸಾಮಾನ್ಯರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕೆಂಪುಕಲ್ಲು ಮತ್ತು ಮರಳು ಸಾಗಾಟಕ್ಕೆ ಸರಿಯಾದ ನೀತಿ ಇಲ್ಲದ ಕಾರಣ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಇದರಿಂದ ನಿಮಾಣ ಕ್ಷೇತ್ರ ಕುಂಠಿತಗೊಂಡಿದ್ದು, ದುಡಿಯುವ ವರ್ಗಕ್ಕೆ ಕೆಲಸವಿಲ್ಲದೆ ಜೀವನ ದುಸ್ತರವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಆರೋಪಿಸಿದರು.
ಕಾಂಗ್ರೆಸ್ ಜನವಿರೋಧಿ ನೀತಿ ಖಂಡಿಸಿ ನಂದಳಿಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆದಿಂಜೆಯಲ್ಲಿ ಶನಿವಾರ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.
ಮೂರು ವರ್ಷಗಳಲ್ಲಿ ಆಶ್ರಯ ಮನೆಗಳ ಮಂಜೂರಾತಿ ನೀಡದಿರುವುದರಿಂದ ಬಡವರಿಗೆ ಅನ್ಯಾಯವಾಗಿದೆ. ವಿಧವಾ ವೇತನ, ವೃದ್ಧಾಪ್ಯ ವೇತನ ಹಾಗೂ ಸಂಧ್ಯಾ ಸುರಕ್ಷಾ ಪಿಂಚಣಿ ಯೋಜನೆಗಳಲ್ಲಿ ಗೊಂದಲ ಉಂಟಾಗಿದೆ. ಅೋಷಿತ ಲೋಡ್ ಶೆಡ್ಡಿಂಗ್ ಹಾಗೂ ನಿರಂತರ ವಿದ್ಯುತ್ ದರ ಏರಿಕೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ ಎಂದರು.
ಬಿಜೆಪಿ ಪ್ರಮುಖರಾದ ಸೂರ್ಯಕಾಂತ್ ಶೆಟ್ಟಿ, ಜಯರಾಮ್ ಸಾಲ್ಯಾನ್, ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಬೋಳ, ದೇವೇಂದ್ರ ಶೆಟ್ಟಿ, ಪ್ರಸಾದ್ ಶೆಟ್ಟಿ ಕಾಡಿಕಂಬಳ, ನಂದಳಿಕೆ ಗ್ರಾಮ ಸಮಿತಿ ಅಧ್ಯಕ್ಷ ರುರಾಮ್ ರಾವ್, ಸರ್ವಜ್ಞ ತಂತ್ರಿ, ಸತೀಶ್ ಅಬ್ಬನಡ್ಕ, ಆಶಾ ದೇವೇಂದ್ರ ಶೆಟ್ಟಿ ಮತ್ತಿತರರಿದ್ದರು.