ಲಾವಣ್ಯಾ ಗೌಡ ಮನೆಗೆ ಜನಪ್ರತಿನಿಧಿಗಳ ಭೇಟಿ

ಹತ್ಯೆಗೀಡಾದ ಲಾವಣ್ಯಾ ಮನೆಗೆ ಜನಪ್ರತಿನಿಧಿಗಳು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ನೀಡಿದರು. ಶಾಸಕರಾದ ರಾಜೇಶ್ ನಾಯ್ಕ, ಉಮಾನಾಥ ಕೋಟ್ಯನ್, ಭಾಗಿರಥಿ ಮುರುಳ್ಯ, ಮಾಜಿ ಸಂಸದ ನಳೀನ್‌ಕುಮಾರ್ ಕಟೀಲ್ ಇದ್ದರು.
ಹತ್ಯೆಗೀಡಾದ ಲಾವಣ್ಯಾ ಮನೆಗೆ ಜನಪ್ರತಿನಿಧಿಗಳು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ನೀಡಿದರು. ಶಾಸಕರಾದ ರಾಜೇಶ್ ನಾಯ್ಕ, ಉಮಾನಾಥ ಕೋಟ್ಯನ್, ಭಾಗಿರಥಿ ಮುರುಳ್ಯ, ಮಾಜಿ ಸಂಸದ ನಳೀನ್‌ಕುಮಾರ್ ಕಟೀಲ್ ಇದ್ದರು.
Published on
ಬಂಟ್ವಾಳ: ಬಿ.ಸಿ.ರೋಡಿನ ಕೆಎಸ್ಸಾರ್ಟಿಸಿ ಬಸ್ಸು ನಿಲ್ದಾಣದಲ್ಲಿ ಹತ್ಯೆಯಾದ ಲಾವಣ್ಯಾ ಗೌಡ ಅವರ ನಿವಾಸಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ ಉಳಿಪ್ಪಾಡಿಗುತ್ತು, ವಾಜಿ ಸಂಸದ ನಳಿನ್ ಕುವಾರ್ ಕಟೀಲು, ಮೂಡುಬಿದಿರೆ ಶಾಸಕ ಉವಾನಾಥ ಕೋಟ್ಯಾನ್, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಪುತ್ತೂರು ವಾಜಿ ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಮೃತಳ ಪಾಲಕರು ಹಾಗೂ ಕುಟುಂಬದವರನ್ನು ಭೇಟಿಯಾಗಿ ಜನಪ್ರತಿನಿಧಿಗಳು, ಪ್ರಕರಣದ ಆರೋಪಿಗೆ ಕಾನೂನಿಡಿ ಕಠಿಣ ಶಿಕ್ಷೆ ಆಗಬೇಕು. ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಸಂಪೂರ್ಣ ಸಹಕರಿಸಲಾಗುವುದು ಎಂದು ಭರವಸೆ ನೀಡಿದರು.

ಲಾವಣ್ಯಾಳ ಕುಟುಂಬಕ್ಕೆ ಧೈರ್ಯ ತುಂಬಿದ ಜನಪ್ರತಿನಿಧಿಗಳು ಇಂತಹ ಘಟನೆಗಳು ಮರುಕಳಿದಂತೆ ಪೊಲೀಸ್ ಇಲಾಖೆ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಜಿ.ಪಂ.ವಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ, ಬೂಡ ವಾಜಿ ಅಧ್ಯಕ್ಷ ದೇವದಾಸ್ ಶೆಟ್ಟಿ, ಪ್ರಮುಖರಾದ ರಾಮದಾಸ್ ಬಂಟ್ವಾಳ, ಸುರೇಶ್ ಮೈರ, ಚಿದಾನಂದ ಕಕ್ಯ, ವಸಂತ ಉಳಿ, ರಂಜಿತ್ ಮೈರ, ಅಜಿತ್ ಶೆಟ್ಟಿ ಕಾರಿಂಜ, ಸತೀಶ್ ಶೆಟ್ಟಿ ಮದ್ವ, ಯಶವಂತ ಕಜೆಕಾರು, ಶಶಿಕಾಂತ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net