ದೊಡ್ಡಹಿತ್ಲು- ಬೈಲೂರ್‌ಕಾರ್ ಹಿತ್ಲು ರಸ್ತೆ ಅಭಿವೃದ್ಧಿಗೆ ಮನವಿ

 ಗಂಗೊಳ್ಳಿ ಗ್ರಾಮದ ದೊಡ್ಡಹಿತ್ಲು- ಬೈಲೂರ್‌ಕಾರ್ ಹಿತ್ಲು ಸಂಪರ್ಕಿಸುವ ಹದಗೆಟ್ಟ ರಸ್ತೆಯನ್ನು ಅಭಿವೃದ್ಧಿಪಡಿಸುವಂತೆ ಸ್ಥಳೀಯರು ಜಯಂತಿ ಖಾರ್ವಿ ಹಾಗೂ ಪಿಡಿಒ ರವಿ ಅವರಿಗೆ ಮನವಿ ಸಲ್ಲಿಸಿದರು.
ಗಂಗೊಳ್ಳಿ ಗ್ರಾಮದ ದೊಡ್ಡಹಿತ್ಲು- ಬೈಲೂರ್‌ಕಾರ್ ಹಿತ್ಲು ಸಂಪರ್ಕಿಸುವ ಹದಗೆಟ್ಟ ರಸ್ತೆಯನ್ನು ಅಭಿವೃದ್ಧಿಪಡಿಸುವಂತೆ ಸ್ಥಳೀಯರು ಜಯಂತಿ ಖಾರ್ವಿ ಹಾಗೂ ಪಿಡಿಒ ರವಿ ಅವರಿಗೆ ಮನವಿ ಸಲ್ಲಿಸಿದರು.
Published on

ಕುಂದಾಪುರ: ಗಂಗೊಳ್ಳಿ ಗ್ರಾಮದ ದೊಡ್ಡಹಿತ್ಲು- ಬೈಲೂರ್‌ಕಾರ್ ಹಿತ್ಲು ಸಂಪರ್ಕಿಸುವ ಹದಗೆಟ್ಟ ರಸ್ತೆಯನ್ನು ಅಭಿವೃದ್ಧಿಪಡಿಸುವಂತೆ ಸ್ಥಳೀಯರು ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿ ಆಗ್ರಹಿಸಿದರು.

ಗ್ರಾಪಂ ಕಾರ್ಯಾಲಯದಲ್ಲಿ ಗ್ರಾಪಂ ಅಧ್ಯಕ್ಷೆ ಜಯಂತಿ ಖಾರ್ವಿ ಹಾಗೂ ಪಿಡಿಒ ರವಿ ಅವರಿಗೆ ಮನವಿ ಸಲ್ಲಿಸಿದ ಸ್ಥಳೀಯರು, ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಂತೆ ಮನವಿ ಮಾಡಿದರು.
ಈ ರಸ್ತೆಯಲ್ಲಿ 2 ತಿಂಗಳಿನಿಂದ ಮಳೆ ನೀರು ನಿಂತು ಜನರ ಹಾಗೂ ವಾಹನಗಳ ಸಂಚಾರಕ್ಕೆ ಮತ್ತು ಶಾಲಾ ಮಕ್ಕಳಿಗೆ ತೀರ ತೊಂದರೆಯಾಗುತ್ತಿದ್ದು, ರಸ್ತೆ ದುಸ್ಥಿತಿ ಬಗ್ಗೆ ಅನೇಕ ಬಾರಿ ಗ್ರಾಪಂ ಗಮನಕ್ಕೆ ತಂದು ಸಮಸ್ಯೆಗೆ ಸ್ಪಂದಿಸುವಂತೆ ಮನವಿ ಮಾಡಿಕೊಂಡಿದ್ದರೂ ಕಾಟಾಚಾರಕ್ಕೆ ತಾತ್ಕಾಲಿಕವಾಗಿ ಸ್ಪಂದಿಸಿದೆ. ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಿಲ್ಲ. ಸುತ್ತಮುತ್ತಲಿನ ರಸ್ತೆಗಳೆಲ್ಲ ಡಾಂಬರು ಮತ್ತು ಕಾಂಕ್ರೀಟ್ ಆಗಿದ್ದು, ಈ ಪರಿಸರಕ್ಕೆ ಮಾತ್ರ ಆ ಭಾಗ್ಯ ಇನ್ನೂ ಕೂಡಿಬಂದಿಲ್ಲ. ಜನಪ್ರತಿನಿಧಿಗಳ ನಿರ್ಲಕ್ಷೃದಿಂದ ಈ ರಸ್ತೆ ಅಭಿವೃದ್ಧಿ ಮರೀಚಿಕೆಯಾಗಿದೆ ಎಂದು ಸ್ಥಳೀಯರು ಆರೋಪಿಸಿದರು.
ಈ ಸಂದರ್ಭ ಸ್ಥಳೀಯರ ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆಯಿತು. ಸಮಸ್ಯೆಗಳು ಬಗೆಹರಿಯದಿದ್ದಾಗ ಸ್ಥಳೀಯರು ಸಮಸ್ಯೆ ಹೇಳಲು ಪಂಚಾಯಿತಿಗೆ ಬಂದ ಸಂದರ್ಭ ಸಮಸ್ಯೆ ಕೇಳಿ ಸಮಾಧಾನದಿಂದ ಮಾತನಾಡಬೇಕಿದ್ದ ಪಿಡಿಒ, ಸಮಸ್ಯೆ ಹೇಳಲು ಬಂದ ಸ್ಥಳೀಯರಲ್ಲಿ ಆಕ್ರೋಶದಿಂದ ಮಾತನಾಡಿರುವುದು ಸಮಜಂಸವಲ್ಲ ಎಂದು ಸ್ಥಳೀಯರಾದ ಸೂರ್ಯಕಾಂತ ಖಾರ್ವಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net