ವಿಶೇಷ ಅನುದಾನಕ್ಕೆ ಮುಖ್ಯಮಂತ್ರಿಗೆ ಮನವಿ

ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ವಿಶೇಷ ಅನುದಾನ ನೀಡುವಂತೆ ನಿಗಮ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ವಿಶೇಷ ಅನುದಾನ ನೀಡುವಂತೆ ನಿಗಮ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಮುದ್ರಾಡಿ ಮಂಜುನಾಥ ಪೂಜಾರಿ ಆಗ್ರಹ
ಹೆಬ್ರಿ: ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ವಿಶೇಷ ಅನುದಾನ ನೀಡುವಂತೆ ನಿಗಮ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

ವಿಶೇಷ ಅನುದಾನಕ್ಕೆ ಮನವಿ:

ಈಗಾಗಲೇ ಅಭಿವೃದ್ಧಿ ನಿಗಮಕ್ಕೆ 10 ಕೋಟಿ ರೂ. ಅನುದಾನ ನೀಡಲಾಗಿದೆ. ಪ್ರತಿ ವರ್ಷ 100 ಕೋಟಿ ರೂ. ನೀಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದರು. ಅದರಂತೆ ವಿಶೇಷ ಅನುದಾನ ನೀಡುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದಾರೆ.

ಸಾಲ ಯೋಜನೆ:

ಮಂಜೂರಾಗಿರುವ 10 ಕೋಟಿ ರೂಪಾಯಿಯಲ್ಲಿ 4 ಕೋಟಿ ರೂ. ಅರಿವು ಕಾರ್ಯಕ್ರಮಕ್ಕೆ, 2.5 ಕೋಟಿ ರೂ. ಗಂಗಾ ಕಲ್ಯಾಣ ಯೋಜನೆಗೆ, 1.5 ಕೋಟಿ ರೂ. ಸಮುದಾಯದಲ್ಲಿ ಮೂರ್ತೆದಾರಿಕೆಯಲ್ಲಿ ತೊಡಗಿಕೊಂಡವರಿಗಾಗಿ ಉಡುಪಿ, ದಕ್ಷಿಣ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗೆ ಪೈಲೇಟ್​ ಪ್ರಾಜೆಕ್ಟ್​ ಮೂಲಕ ಮಹಿಳೆಯರಿಗೂ ಆದ್ಯತೆ ನೀಡುವ ನಿಟ್ಟಿನಲ್ಲಿ ಸಾಲ ಯೋಜನೆ ನೀಡಲಾಗಿದೆ ಎಂದು ಮುದ್ರಾಡಿ ಮಂಜುನಾಥ ಪೂಜಾರಿ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net