ಉಪ್ಪಿನಂಗಡಿಯಲ್ಲಿ ನದಿ ನೀರಿನ ಮಟ್ಟ ಹೆಚ್ಚಳ

ಕುಮಾರಧಾರಾ ಮತ್ತು ನೇತ್ರಾವತಿ ನದಿಗಳ ನೀರಿನ ಮಟ್ಟ.
ಕುಮಾರಧಾರಾ ಮತ್ತು ನೇತ್ರಾವತಿ ನದಿಗಳ ನೀರಿನ ಮಟ್ಟ.
Published on
ಉಪ್ಪಿನಂಗಡಿ: ಮಳೆ ಬಿರುಸು ಪಡೆಯುತ್ತಿದ್ದಂತೆಯೇ ಜಿಲ್ಲೆಯ ಜೀವನದಿಗಳಾದ ನೇತ್ರಾವತಿ ಹಾಗೂ ಕುಮಾರಧಾರಾ ನದಿಗಳಲ್ಲಿ ನೀರಿನ ಹರಿವು ಗಣನೀಯವಾಗಿ ಹೆಚ್ಚಳವಾಗಿದ್ದು, ಬುಧವಾರ ಸಂಜೆ ವೇಳೆಗೆ ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿಯ ನೀರಿನ ಮಟ್ಟ 25.03 ಮೀಟರ್ ದಾಖಲಾಗಿತ್ತು.
ಉಭಯ ನದಿಗಳ ಪೈಕಿ ಕುಮಾರಧಾರಾ ನದಿಯಲ್ಲಿ ಹೆಚ್ಚಿನ ನೀರು ಹರಿಯುತ್ತಿದ್ದು, ಇದರ ನೀರಿನ ಹರಿಯುವ ವೇಗಕ್ಕೆ ನೇತ್ರಾವತಿ ನದಿಯ ನೀರು ತಡೆದಂತಾಗಿದೆ. ಬಂದಾರು ಗ್ರಾಮದ ಪೇರಲ್ತಪಳಿಕೆ ಎಂಬಲ್ಲಿ ಗುಡ್ಡ ಕುಸಿದು ಇಸುಬು ಎಂಬುವರ ಮನೆಯ ಕೊಟ್ಟಿಗೆಗೆ ಹಾನಿಯಾಗಿದೆ. ಮನೆಯ ಮಂದಿಯನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲು ಸೂಚಿಸಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net