ಗಾಳಿ-ಮಳೆಗೆ ಮನೆ ಮೇಲ್ಛಾವಣಿ ಕುಸಿತ

Rain
Rain
Published on

ಬದಿಯಡ್ಕ: ಕುಂಬ್ಡಾಜೆ ಗ್ರಾಮ ಪಂಚಾಯಿತಿಯ ಪೊಡಿಪ್ಪಳದ ಯೋಗೀಶ್ ಎಂಬುವರ ಹೆಂಚಿನ ಮನೆಯ ಮೇಲ್ಛಾವಣಿ ಬುಧವಾರ ಸುರಿದ ಗಾಳಿ-ಮಳೆಗೆ ಸಂಪೂರ್ಣ ಕುಸಿದು ಬಿದ್ದಿದೆ. ಘಟನೆ ವೇಳೆ ಮನೆಯಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಾಪಾಯವಾಗಿಲ್ಲ.

ಕುಂಬ್ಡಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯಶೋದಾ ಎನ್., ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಪ್ರಿಯಾಂಕಾ ಎ.ಸಿ., ಬಿಜೆಪಿ ಕುಂಬ್ಡಾಜೆ ಪಂಚಾಯಿತಿ ಕಾರ್ಯದರ್ಶಿ ಪ್ರಮೋದ್ ಭಂಡಾರಿ, ಸುರೇಶ್, ಭಾಸ್ಕರ ಪೊಡಿಪ್ಪಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net