ಬಂಧಿತ ಆರೋಪಿ ಚರಣ್ ರಾಜ್ ವಿರುದ್ಧ ಅವಳಿ ಜಿಲ್ಲೆಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ ಹತ್ತಾರು ಗಂಭೀರ ಪ್ರಕರಣಗಳು ದಾಖಲಾಗಿವೆ. ಬಂಟ್ವಾಳ ಗ್ರಾಮಾಂತರ, ಸುರತ್ಕಲ್, ಮಂಗಳೂರು ಪೂರ್ವ ಹಾಗೂ ಉಡುಪಿ ನಗರ ಪೊಲೀಸ್ ಠಾಣೆಗಳಲ್ಲಿ ಈತನ ವಿರುದ್ಧ ಕೊಲೆಯತ್ನ, ಮಾರಣಾಂತಿಕ ಹಲ್ಲೆ, ಅಕ್ರಮ ಕೂಟ ರಚನೆ, ಮಹಿಳೆಯರ ಮೇಲೆ ದೌರ್ಜನ್ಯ, ಮಾದಕ ದ್ರವ್ಯ (ಡ್ರಗ್ಸ್) ಸೇವನೆ ಹಾಗೂ ಸಾಗಾಟ, ಎಸ್.ಸಿ., ಎಸ್.ಟಿ ಕೌರ್ಯ ತಡೆ ಕಾಯ್ದೆಯಡಿ ಒಟ್ಟು 10 ಪ್ರಕರಣಗಳು ದಾಖಲಾಗಿವೆ.