ಇಸ್ಲಾಮಿಕ್​ ಮತೀಯ ಸಂಘಟನೆ ಪ್ರಶ್ನಿಸುವ ಧೈರ್ಯವಿದೆಯೇ?

ಶಾಸಕ ಯಶ್​ಪಾಲ್​ ಸುವರ್ಣ
ಶಾಸಕ ಯಶ್​ಪಾಲ್​ ಸುವರ್ಣ
Published on
ಉಡುಪಿ: ಭಾರತ ಸ್ವಾತಂತ್ರ್ಯ ಪಡೆಯುವ ಮುನ್ನವೇ ರಾಷ್ಟ್ರೀಯತೆಯ ಚಿಂತನೆಯ ತಳಹದಿಯಲ್ಲಿ ಸ್ಥಾಪನೆಗೊಂಡು ನೂರು ವರ್ಷ ಪೂರೈಸಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ನೋಂದಣಿಯ ಬಗ್ಗೆ ಪ್ರಶ್ನೆ ಮಾಡುವ ಗೃಹ ಸಚಿವ ಪ್ರಿಯಾಂಕ್​ ರ್ಖಗೆಯವರಿಗೆ ಸಮಾಜದ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವ ಇಸ್ಲಾಮಿಕ್​ ಮತೀಯವಾದಿ ಸಂಘಟನೆಗಳನ್ನು ಪ್ರಶ್ನಿಸುವ ಧೈರ್ಯವಿದೆಯೇ ಎಂದು ಶಾಸಕ ಯಶ್​ಪಾಲ್​ ಸುವರ್ಣ ಹೇಳಿದ್ದಾರೆ.
ಸ್ವಾತಂತ್ರ್ಯ ಹೋರಾಟ, ತುರ್ತು ಪರಿಸ್ಥಿತಿಯ ಸಂದರ್ಭ ಹಾಗೂ ಪ್ರಕೃತಿ ವಿಕೋಪಗಳು ಸಂಭವಿಸಿದಾಗ ಆರ್​ ಎಸ್​ ಎಸ್​ ಲಕ್ಷಾಂತರ ಕಾರ್ಯಕರ್ತರು ಜೀವದ ಹಂಗು ತೊರೆದು ರಾಷ್ಟ್ರ ರಕ್ಷಣೆಯಲ್ಲಿ ತೊಡಗಿಸಿಕೊಳ್ಳುತ್ತಾರೆ. ವ್ಯಕ್ತಿ ನಿಮಾರ್ಣದ ಮೂಲಕ ರಾಷ್ಟ್ರ ನಿಮಾರ್ಣದ ಮಹಾ ಸಂಕಲ್ಪದೊಂದಿಗೆ ಸಾಗುತ್ತಿರುವ ದೇಶಭಕ್ತ ಸಂಘಟನೆ ನತೆಗೆ ಧಕ್ಕೆ ತರುವ ಮೂಲಕ ಕಾಂಗ್ರೆಸ್​ ಪಕ್ಷದ ರಾಷ್ಟ್ರೀಯತೆ ವಿರೋಧಿ ನಿಲುವನ್ನು ಪ್ರಿಯಾಂಕ್​ ರ್ಖಗೆ ಮತ್ತೊಮ್ಮೆ ಪ್ರದರ್ಶಿಸಿದ್ದಾರೆ. ಭಯೋತ್ಪಾದನೆ, ಸಮಾಜದಲ್ಲಿ ಅಶಾಂತಿ, ಆಂತರಿಕ ಭದ್ರತೆಗೆ ಸವಾಲು ಹಾಕಿರುವ ಇಸ್ಲಾಮಿಕ್​ ಮತೀಯ ಶಕ್ತಿಗಳು ಹಲವಾರು ಪ್ರಕರಣಗಳಲ್ಲಿ ಭಾಗಿಯಾದ ಬಗ್ಗೆ ಪುರಾವೆಗಳಿದ್ದರೂ ಈವರೆಗೆ ಪ್ರಿಯಾಂಕ್​ ರ್ಖಗೆ ಚಕಾರ ಎತ್ತಿಲ್ಲ. ಕಾಂಗ್ರೆಸ್​ ಸರ್ಕಾರದ ಅವಧಿಯಲ್ಲಿ ರಾಜ್ಯದ ಮೂಲೆ ಮೂಲೆಗಳಲ್ಲಿ ನೂರಾರು ಮಸೀದಿ, ಮದರಸಗಳು ಕಾನೂನು ನಿಯಮಗಳನ್ನು ಗಾಳಿಗೆ ತೂರಿ ನಿಮಾರ್ಣವಾಗುತ್ತಿದ್ದರೂ ಸರ್ಕಾರ ಕೈಕಟ್ಟಿ ಕುಳಿತಿದೆ. ರಾಜ್ಯ ಸರ್ಕಾರದ ಜನ ವಿರೋಧಿ ನೀತಿಯಿಂದ ರಾಜ್ಯದಲ್ಲಿ ವ್ಯಾಪಕ ಆಕ್ರೋಶ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಿಯಾಂಕ್​ ರ್ಖಗೆ ಇಂತಹ ಬೇಜವಾಬ್ದಾರಿ ಹೇಳಿಕೆಗಳ ಮೂಲಕ ರಾಜ್ಯದ ಜನತೆಯ ದಿಕ್ಕು ತಪ್ಪಿಸಲು ವಿಫಲ ಪ್ರಯತ್ನ ಮಾಡುತ್ತಿದ್ದಾರೆ. ರಾಜ್ಯದ ಜಾಗೃತ ಸಮಾಜ ಆರ್​. ಎಸ್​. ಎಸ್​. ವಿರುದ್ಧದ ಬಾಲಿಶ ಹೇಳಿಕೆಗಳಿಗೆ ತಕ್ಕ ಉತ್ತರ ನೀಡಲಿದೆ ಎಂದು ಯಶ್​ ಪಾಲ್​ ಸುವರ್ಣ ಪ್ರಕಟಣೆಯಲ್ಲಿ ಹೇಳಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net