ಮಂಗಳೂರಿನಲ್ಲಿ ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಬಿ.ಜಯಕರ್ ಶೆಟ್ಟಿ ಇಂದ್ರಾಳಿ ಹಾಗೂ ರಾಜೇಶ್ ವಿ. ಶೇರಿಗಾರ್ 'ಸಾಧನಾ' ಪ್ರಶಸ್ತಿ ಸ್ವೀಕರಿಸಿದರು. ಡಾ. ಎಂ.ಎನ್. ರಾಜೇಂದ್ರಕುಮಾರ್, ಎಲ್.ಉಮಾನಾಥ, ಪ್ರವಿಣಕುಮಾರ್, ಲಾವಣ್ಯಾ ಕೆ.ಆರ್. ಇತರರಿದ್ದರು.
Published on:
Copied
Follow Us
* ಸತತ 20ನೇ ಬಾರಿ ಗೌರವದ ಹೆಗ್ಗಳಿಕೆ
ಉಡುಪಿ: ಸಹಕಾರ ಕ್ಷೇತ್ರದಲ್ಲಿ ನಿರಂತರ ಪ್ರಗತಿ ಮತ್ತು ಸರ್ವತೋಮುಖ ಅಭಿವೃದ್ಧಿ ಸಾಧಿಸಿರುವ ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 2025-26ನೇ ಸಾಲಿನ ಕಾರ್ಯಕ್ಷಮತೆಗೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನಿಂದ ನೀಡಲ್ಪಡುವ 'ಸಾಧನಾ' ಪ್ರಶಸ್ತಿ ಲಭಿಸಿದೆ.
ಮಂಗಳೂರಿನಲ್ಲಿ ಶನಿವಾರ (ಆ.22) ನಡೆದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ವಾರ್ಷಿಕ ಮಹಾಸಭೆಯ ಸಂದರ್ಭದಲ್ಲಿ ಬ್ಯಾಂಕ್ನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರಕುಮಾರ್ ಪ್ರಶಸ್ತಿ ಪ್ರದಾನ ಮಾಡಿದರು.
ಬಡಗುಬೆಟ್ಟು ಸೊಸೈಟಿಯ ಅಧ್ಯಕ್ಷ ಬಿ.ಜಯಕರ್ ಶೆಟ್ಟಿ ಇಂದ್ರಾಳಿ ಹಾಗೂ ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ. ಶೇರಿಗಾರ್ ಪ್ರಶಸ್ತಿ ಸ್ವೀಕರಿಸಿದರು. ಸತತ 20ನೇ ಬಾರಿಗೆ ಪುರಸ್ಕಾರ ಗಳಿಸುವ ಮೂಲಕ ಸೊಸೈಟಿ ಗಮನಾರ್ಹ ಸಾಧನೆ ಮಾಡಿದೆ.
ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕರಾದ ಎಲ್.ಉಮಾನಾಥ, ಸಹಾಯಕ ಪ್ರಧಾನ ವ್ಯವಸ್ಥಾಪಕ ಪ್ರವೀಣಕುಮಾರ್, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕಿ ಲಾವಣ್ಯಾ ಕೆ.ಆರ್., ದ.ಕ. ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕ ರಮೇಶ್ ಎಚ್.ಎನ್. ಇನ್ನಿತರರು ಉಪಸ್ಥಿತರಿದ್ದರು.