ತಾಂತ್ರಿಕ ಸವಾಲು ಎದುರಿಸಿ ಕಾಮಗಾರಿ ಪೂರ್ಣ: ಸಂಸದ ಕೋಟ

ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಂತೆಕಟ್ಟೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66 ಮೇಲ್ಸೇತುವೆ ಲೋಕಾರ್ಪಣೆಗೊಳಿಸಿದರು.
ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಂತೆಕಟ್ಟೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66 ಮೇಲ್ಸೇತುವೆ ಲೋಕಾರ್ಪಣೆಗೊಳಿಸಿದರು.
Published on
ಉಡುಪಿ: ಸಂತೆಕಟ್ಟೆ ಮೇಲ್ಸೇತುವೆ ಕಾಮಗಾರಿ ವೇಳೆ ಭೂಗರ್ಭದಲ್ಲಿ ಬಂಡೆ ಸಿಕ್ಕಿದ್ದರಿಂದ ನಿಮಾರ್ಣ ಕಾರ್ಯದಲ್ಲಿ ವಿಳಂಬ ಉಂಟಾಯಿತು. ತಾಂತ್ರಿಕ ಸವಾಲುಗಳನ್ನು ಎದುರಿಸಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲಾಗುವುದು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಸಂತೆಕಟ್ಟೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66 ಮೇಲ್ಸೇತುವೆ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ಮೇಲ್ಸೇತುವೆ ವಾಹನ ಸಂಚಾರಕ್ಕೆ ಸಂಪೂರ್ಣವಾಗಿ ಮುಕ್ತಗೊಳಿಸಲಾಗಿದೆ. ಇದೇ ಭಾಗದಲ್ಲಿ ನಿಮಾರ್ಣಗೊಂಡ ಸಂತೆಕಟ್ಟೆ ಅಂಡರ್​ಪಾಸ್​ ಈಗಾಗಲೇ ಲೋಕಾರ್ಪಣೆಗೊಂಡು ಸಂಚಾರಕ್ಕೆ ತೆರೆಯಲ್ಪಟ್ಟಿದೆ. ಇದೀಗ ಮೇಲ್ಸೇತುವೆಯೂ ಆರಂಭವಾಗಿರುವುದರಿಂದ ಈ ಪ್ರದೇಶದಲ್ಲಿ ದಿನನಿತ್ಯ ಉಂಟಾಗುತ್ತಿದ್ದ ಟ್ರಾಫಿಕ್​ ದಟ್ಟಣೆ ಸಮಸ್ಯೆಗೆ ಸಾಕಷ್ಟು ಪರಿಹಾರ ಸಿಗಲಿದೆ. ವಿಶೇಷವಾಗಿ ಉಡುಪಿ&ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ ಅನುಕೂಲವಾಗಲಿದೆ. ಸರ್ವಿಸ್​ ರಸ್ತೆಯಲ್ಲಿ ಸಣ್ಣಪುಟ್ಟ ಕೆಲಸಗಳು ಬಾಕಿ ಉಳಿದಿದ್ದು, ಮುಂದಿನ ದಿನಗಳಲ್ಲಿ ಅಧಿಕೃತ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.
ಸಂತೆಕಟ್ಟೆ&ಕಲ್ಯಾಣಪುರ ಮಾಜಿ ಅಧ್ಯಕ್ಷ ಸತೀಶ್​ ನಾಯ್ಕ, ಮಾಜಿ ಗ್ರಾಪಂ ಸದಸ್ಯ ಕೃಷ್ಣ ದೇವಾಡಿಗ, ಉಮೇಶ್​ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net