ಸರ್ಕಾರಿ ಶಾಲೆಗೆ ಕೊಡುಗೆ ನೀಡಿದರೆ ಸಂತೃಪ್ತಿ

 ಬಿಜೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಂಪ್ಯೂಟರ್ ಲ್ಯಾಬ್‌ನ್ನು ಶಾಸಕ ಗುರುರಾಜ ಗಂಟಿಹೊಳೆ ಲೋಕಾರ್ಪಣೆಗೊಳಿಸಿದರು. ಟ್ರಸ್ಟ್ ಅಧ್ಯಕ್ಷ ಡಾ.ಗೋವಿಂದ ಬಾಬು ಪೂಜಾರಿ, ಸಹಾಯಕ ನಿರ್ದೇಶಕಿ ಪೂರ್ಣಿವಾ ಮೊದಲಾದವರಿದ್ದರು.
ಬಿಜೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಂಪ್ಯೂಟರ್ ಲ್ಯಾಬ್‌ನ್ನು ಶಾಸಕ ಗುರುರಾಜ ಗಂಟಿಹೊಳೆ ಲೋಕಾರ್ಪಣೆಗೊಳಿಸಿದರು. ಟ್ರಸ್ಟ್ ಅಧ್ಯಕ್ಷ ಡಾ.ಗೋವಿಂದ ಬಾಬು ಪೂಜಾರಿ, ಸಹಾಯಕ ನಿರ್ದೇಶಕಿ ಪೂರ್ಣಿವಾ ಮೊದಲಾದವರಿದ್ದರು.
Published on
ಬೈಂದೂರು: ನಮ್ಮಲ್ಲಿರುವ ಸಂಪತ್ತಿನ ಒಂದಂಶವನ್ನು ಸರ್ಕಾರಿ ಶಾಲೆಗಳಿಗೆ ಕೊಡುಗೆಯಾಗಿ ನೀಡುವುದರಿಂದ ಸಂತೃಪ್ತಿ ಜತೆಗೆ ಸೇವೆಯ ಸಾರ್ಥಕತೆ ದೊರೆಯುತ್ತದೆ ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.
ಬಿಜೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ರೋಸಾಫ್ಟ್ ಕಾರ್ಪೋರೇಶನ್ ಇಂಡಿಯಾ ಹಾಗೂ ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೆಬಲ್ ಟ್ರಸ್ಟ್ ಕೊಡುಗೆಯಾಗಿ ನೀಡಿದ ಕಂಪ್ಯೂಟರ್ ಲ್ಯಾಬ್‌ನ್ನು ಶುಕ್ರವಾರ ಲೋಕಾರ್ಪಣೆಗೊಳಿಸಿ ವಾತನಾಡಿದರು.
ಟ್ರಸ್ಟ್ ಅಧ್ಯಕ್ಷ ಡಾ.ಗೋವಿಂದ ಬಾಬು ಪೂಜಾರಿ ವಾತನಾಡಿ, ಗ್ರಾಮೀಣ ಭಾಗದ ಎಲ್ಲ ವಿದ್ಯಾರ್ಥಿಗಳು ಕಂಪ್ಯೂಟರ್ ಲ್ಯಾಬ್ ಸೌಲಭ್ಯವನ್ನು ಸದುಪಯೋಗಿಸಬೇಕು ಎಂದರು.
ಎಸ್‌ಡಿಎಂಸಿ ಅಧ್ಯಕ್ಷ ರಮೇಶ ವಿ.ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಡಾ.ಗೋವಿಂದ ಬಾಬು ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿವಾ, ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ಕೆ.ನಾಯ್ಡ, ಹಳೇ ವಿದ್ಯಾರ್ಥಿ ಸಂದ ಅಧ್ಯಕ್ಷ ನಂದೀಶ್ ದೇವಾಡಿಗ, ರಾಜೇಂದ್ರ ಬಿಜೂರು, ಗಿರೀಶ್ ಶ್ಯಾನುಭಾಗ್, ಗಂಗಾಧರ ದೇವಾಡಿಗ, ಅಲಕಾ ಸುರೇಶ್ ಬಿಜೂರು, ಗೋಪಾಲ ಪೂಜಾರಿ ವಸ್ತೆ, ಟ್ರಸ್ಟ್ ವ್ಯವಸ್ಥಾಪಕ ನಾಗರಾಜ ಪಿ.ಯಡ್ತರೆ ಮೊದಲಾದವರಿದ್ದರು. ಮುಖ್ಯಶಿಕ್ಷಕ ಮಂಜುನಾಥ ಎಸ್. ನಿರೂಪಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net