ಬೆಳ್ಮಣ್ ಹೊಸವಾರಿನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೇ ಕಟ್ಟಡ ಅತ್ಯಂತ ಶಿಥಿಲಾವಸ್ಥೆಯಲ್ಲಿದ್ದು, ಯಾವುದೇ ಕ್ಷಣದಲ್ಲಿ ಕುಸಿದು ಬೀಳುವ ಭೀತಿಯಲ್ಲಿದೆ. ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆ ನಡುವೆ ಕಟ್ಟಡದ ಮೇಲ್ಛಾವಣಿ ಒಂದೊಂದೆ ಭಾಗದಲ್ಲಿ ಕುಸಿಯುತ್ತಿದೆ. ಮುಖ್ಯ ರಸ್ತೆ ಬದಿಯಲ್ಲಿಯೇ ಈ ಶಾಲಾ ಕಟ್ಟಡ ಇರುವುದರಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಜೀವಕ್ಕೆ ಅಪಾಯ ಕಾದಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.