ಕಸ ನಿರ್ವಹಣಾ ವ್ಯವಸ್ಥೆ ಇಲ್ಲದೆ ಮಂಗಳೂರಿಗೆ ತ್ಯಾಜ್ಯ ಸಾಗಿಸಲಾಗುತ್ತಿದೆ ಎಂದು ಮುಖ್ಯಾಧಿಕಾರಿ ತಿಳಿಸಿದಾಗ, ಮನೆಗಳಲ್ಲಿ ಪೈಪ್ ಕಾಂಪೋಸ್ಟ್ ನಿರ್ಮಾಣಕ್ಕೆ ಮೀಸಲಿಟ್ಟಿದ್ದ 5 ಲಕ್ಷ ರೂ. ಅನುದಾನ ಏನಾಯಿತು? ಎಂದು ಸುಜಿತ್ ಇಂಜಿನಿಯರ್ ಅವರನ್ನು ತರಾಟೆಗೆ ತೆಗೆದುಕೊಂಡರು. ಪ್ರಾಯೋಗಿಕವಾಗಿ ಒಂದು ವಾರ್ಡ್‌ನಲ್ಲಿ ಪೈಪ್ ಕಾಂಪೋಸ್ಟ್ ಜಾರಿಗೊಳಿಸುವುದು ಸೂಕ್ತ ಎಂದು ಸ್ಥಾಯಿ ಸಮಿತಿ ಅಧ್ಯಕ್ಷ ಧೀರಜ್ ಕುಸಾಲನಗರ ಅಭಿಪ್ರಾಯಪಟ್ಟರು. ತ್ಯಾಜ್ಯ ವಾಹನ ತೊಳೆಯಲು ಯಂತ್ರೋಪಕರಣಗಳ ಅಗತ್ಯವಿದೆ ಎಂದು ಸಭೆಯಲ್ಲಿ ಚರ್ಚಿಸಲಾಯಿತು. ಮುಂದಿನ ದಿನಗಳಲ್ಲಿ ಪಪಂ ವ್ಯಾಪ್ತಿಯಲ್ಲಿ ಹೊಸ ಮನೆಗಳ ನಿರ್ಮಾಣ ಹೆಚ್ಚಲಿದ್ದು, ತ್ಯಾಜ್ಯ ಸಮಸ್ಯೆ ಗಂಭೀರವಾಗಲಿದೆ ಎಂದು ಆರೋಗ್ಯಾಧಿಕಾರಿ ವಿಕ್ರಂ ಕುಂದಾಪುರ ಎಚ್ಚರಿಸಿದರು.