ಗಡಿನಾಡಿನಲ್ಲಿ ಕನ್ನಡ ಉಳಿಸಿ ಬೆಳೆಸುವ ಶಾಲೆಗಳು

 ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ‘ಸ್ಮಾರ್ಟ್ ಬೋರ್ಡ್ ಪ್ಯಾನೆಲ್’ ಉದ್ಘಾಟಿಸಿದರು. ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ, ಸಿ.ಎ.ತಾಜುದ್ದೀನ್ ಮೊದಲಾದವರಿದ್ದರು.
ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ‘ಸ್ಮಾರ್ಟ್ ಬೋರ್ಡ್ ಪ್ಯಾನೆಲ್’ ಉದ್ಘಾಟಿಸಿದರು. ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ, ಸಿ.ಎ.ತಾಜುದ್ದೀನ್ ಮೊದಲಾದವರಿದ್ದರು.
Published on
ಮಂಜೇಶ್ವರ: ಗಡಿ ಭಾಗಗಳಲ್ಲಿ ಕನ್ನಡ ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಕನ್ನಡ ಶಾಲೆಗಳ ಪಾತ್ರ ಮಹತ್ತರ. ಗಡಿನಾಡ ಶಾಲೆಗಳನ್ನು ತಂತ್ರಜ್ಞಾನದೊಂದಿಗೆ ಸಬಲೀಕರಣಗೊಳಿಸಲು ಸರ್ಕಾರ ಹಾಗೂ ಪ್ರಾಧಿಕಾರ ಸದಾ ಬದ್ಧವಾಗಿದೆ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ತಿಳಿಸಿದರು.
ಮೀಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೀಯಪದವಿನ ಶ್ರೀ ವಿದ್ಯಾವರ್ಧಕ ಉನ್ನತ ಪ್ರೌಢಶಾಲೆಯಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ನೀಡಲಾದ ‘ಸ್ಮಾರ್ಟ್ ಬೋರ್ಡ್ ಪ್ಯಾನೆಲ್’ ಅನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.
ಶಾಲಾ ಪ್ರಬಂಧಕ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಅಧ್ಯಕ್ಷತೆ ವಹಿಸಿದ್ದರು. ಮೀಂಜ ಗ್ರಾಪಂ ಅಧ್ಯಕ್ಷ ಸಿ.ಎ.ತಾಜುದ್ದೀನ್, ಪಂಚಾಯಿತಿ ಸದಸ್ಯ ಸಿದ್ದೀಕ್ ಕೆ.ಎಂ. ಉಪಸ್ಥಿತರಿದ್ದರು.
ಪ್ರಾಧಿಕಾರದ ಸದಸ್ಯರಾದ ಶಿವರೆಡ್ಡಿ ಖ್ಯಾಡೇದ, ಎ.ಆರ್.ಸುಬ್ಬಯ್ಯಕಟ್ಟೆ, ನಿವೃತ್ತ ಅಧ್ಯಾಪಕ ದಾಮೋದರ ಮಾಸ್ತರ್, ಹಿರಿಯ ಗಮಕ ಕಲಾವಿದ ತೆಕ್ಕೇಕೆರೆ ಶಂಕರನಾರಾಯಣ ಭಟ್, ಪ್ರಾಂಶುಪಾಲ ರಮೇಶ್ ಕೆ.ಎನ್., ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಹಮೀದ್ ಮೈತಾಳ್ ಮತ್ತಿತರರು ಉಪಸ್ಥಿತರಿದ್ದರು.
ಮುಖ್ಯಶಿಕ್ಷಕಿ ಮೃದುಲಾ ಕೆ.ಎಂ. ಸ್ವಾಗತಿಸಿದರು. ಲಕ್ಷ್ಮೀಶ ಬಿ. ವಂದಿಸಿದರು. ಕಿರಣ್ ಕೆ.ಎಸ್. ಕಾರ್ಯಕ್ರಮ ನಿರೂಪಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net